ಭೂಪರಿವರ್ತನೆ ಲೇಔಟ್‌ಗಳು ನಿಯಮ ಉಲ್ಲಂಘನೆ ಆರೋಪಕ್ಕೆ ನಿರೂಪ್ ಸ್ಪಷ್ಟನೆ

ರಿಪ್ಪನ್‌ಪೇಟೆ: ಇಲ್ಲಿನ ಗ್ರಾಮ ಪಂಚಾಯತಿ ವಸತಿ ನಿವೇಶನ ಉದ್ದೇಶಕ್ಕಾಗಿ ಭೂಪರಿವರ್ತನೆಯನ್ನು ಮಾಡಿರುವ ಕೆಲವು ಲೇಔಟ್‌ಗಳು ನಿಯಮವನ್ನು ಉಲ್ಲಂಘಿಸಿದ್ದಾರೆಂಬ ಗ್ರಾಮ ಪಂಚಾಯತಿ ಸದಸ್ಯ ಜಿ.ಡಿ.ಮಲ್ಲಿಕಾರ್ಜುನ ಆರೋಪಕ್ಕೆ ಸ್ಪಷ್ಟನೆ ನೀಡಿದ ಗ್ರಾಮ ಪಂಚಾಯತಿ ಸದಸ್ಯ ನಿರೂಪ್ ಆರ್., ಸಾಮಾನ್ಯ ಸಭೆಯಲ್ಲಿ ಮಾತನಾಡದೆ ಬಹಿರಂಗವಾಗಿ ಆರೋಪಿಸಲಾಗಿರುವುದು ಖಂಡನೀಯ ಎಂದು ಹೇಳಿ, ನಗರ ಮತ್ತು ಗ್ರಾಮೀಣ ಯೋಜನಾ ಇಲಾಖೆಯವರು ಕಾನೂನು ಬದ್ದವಾಗಿಯೇ ತಾಂತ್ರಿಕ ಅನುಮೋದನೆ ನೀಡಿದ್ದಾರೆಂದು ಸ್ಪಷ್ಟನೆ ನೀಡಿದರು.

ಗ್ರಾಮ ಪಂಚಾಯತಿ ಸಭಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗವಟೂರು ಗ್ರಾಮದ ಸರ್ವೇ ನಂ 361/2 ರಲ್ಲಿ 1.09 ಎಕರೆ ಕೃಷಿ ಭೂಮಿಯನ್ನು ವಸತಿ ಉದ್ದೇಶಕ್ಕಾಗಿ ಭೂ ಪರಿವರ್ತಿಸಲು ಖತಿಜಾಭಿ ಕೋಂ ಖಾಸಿಂಸಾಬ್ ಇವರು ಅರ್ಜಿ ಸಲ್ಲಿಸಿರುತ್ತಾರೆ. ಆದರೆ ಈ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಇರುವುದು ವಾಸ್ತವವಾಗಿದ್ದು ಗ್ರಾಮ ಪಂಚಾಯ್ತಿ ಅಭಿವೃದ್ದಿ ಆಧಿಕಾರಿಗಳು ನಿರಾಕ್ಷೇಪಣಾ ಪತ್ರ ನೀಡಿರುತ್ತಾರೆ ಎಂದು ತಿಳಿಸಿದರು.

ಆರೋಪಿಸಿರುವ ಗ್ರಾಮ ಪಂಚಾಯತಿ ಸದಸ್ಯರು ಈ ಹಿಂದೆ ಲೇಔಟ್ ಮಾಲೀಕರನ್ನು ಬ್ಲಾಕ್ ಮೇಲ್ ಮಾಡಿ ಸಿಂಥೆಟಿಕ್ಸ್ ಡ್ರಮ್ ಪಡೆದು ಈಗ ತಿರುಗಿ ಬಿದ್ದಿದ್ದಾರೆ ಕಾರಣ, ತಮ್ಮ ಜಮೀನಿಗೆ ಸಂಪರ್ಕ ಕಲ್ಪಿಸುವ ರಸ್ತೆ ವಿಚಾರದಲ್ಲಿ ಈ ರೀತಿಯಲ್ಲಿ ಸುಳ್ಳು ಆರೋಪ ಮಾಡುತ್ತಿದ್ದು ಅದಕ್ಕೆ ಸಂಬಂಧಪಟ್ಟ ಗ್ರಾಮಾಡಳಿತದವರು ದಾಖಲೆಗಳನ್ನು ಜೋಪಾನ ಮಾಡಿಕೊಳ್ಳುವ ಜವಾಬ್ದಾರಿಯಾಗಿದ್ದು ದಾಖಲೆಯಿಲ್ಲ ಎಂದು ಹೇಳಿಕೊಂಡಿರುವುದರ ಬಗ್ಗೆ ಇಲಾಖೆಯ ಜವಾಬ್ದಾರಿಯಾಗಿದೆ ಎಂದ ಅವರು, ಲೇಔಟ್ ಮಾಡುವಾಗ ಸಾರ್ವಜನಿಕರಿಗೆ ಮೂಲ ಸೌಕರ್ಯ ಒದಗಿಸುವಂತಹ ರಸ್ತೆ ಸಂಪರ್ಕ ಬೀದಿ ದೀಪ ಒಳಚರಂಡಿ ಪಾರ್ಕ್ ಸಿಎ ನಿವೇಶನಗಳ ಹೀಗೆ ಮೂಲಸೌಲಭ್ಯಗಳ ನೀಲನಕ್ಷೆಯಂತೆ ನಗರ ಮತ್ತು ಗ್ರಾಮೀಣ ಯೋಜನೆಯವರ ತಾಂತ್ರಿಕ ಅನುಮೋದನೆ ನೀಡುತ್ತಾರೆ ಮತ್ತು ಈಗಾಗಲೇ ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಲೇಔಟ್ ಮಾಲೀಕರ ಬಗ್ಗೆ ಕೆಲವರು ಇಲ್ಲಸಲ್ಲದ ಆರೋಪಗಳನ್ನು ಮಾಡಿ ಬ್ಲಾಕ್ ಮೇಲ್ ಮಾಡುವವರ ಸಂಖ್ಯೆ ನಿತ್ಯ ಹೆಚ್ಚಾಗುತ್ತಿದ್ದಾರೆ. ಈ ಬಗ್ಗೆ ಹೆದರುವ ಪ್ರಶ್ನೆಯೇ ಇಲ್ಲ, ಎದುರಿಸಲು ಸಿದ್ದವಿರುವುದಾಗಿ ಹೇಳಿ, ಕಾನೂನು ಬದ್ದವಾಗಿಯೇ ಇರುವವರಿಗೆ ಹೆದರುವ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಅನ್ವರ್ ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

7 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

8 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

10 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

10 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

18 hours ago