ಮಕ್ಕಳ ಬೆಳವಣಿಗೆಗೆ ಅನುಗುಣ ಶಿಕ್ಷಣ ನೀಡುವುದು ಇಂದಿನ ಅಗತ್ಯ

0 341

ರಿಪ್ಪನ್‌ಪೇಟೆ: ಖಾಸಗಿ ಕಾನ್ವೆಂಟ್‌ಗಳಲ್ಲಿ ಮಕ್ಕಳಿಗೆ ಶಿಕ್ಷಣದಿಂದ ಹೆಚ್ಚು ಹೊರೆಯಾಗುವುದು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಬೆಳವಣಿಗೆಗೆ ಅನುಗುಣವಾಗಿ ಶಿಕ್ಷಣ ನೀಡುವುದರಿಂದ ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗಗೆ ಸಹಕಾರಿಯಾಗಿದೆ. ಚಿಕ್ಕ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದರಿಂದ ಮುಂದೆ ಸುಸಂಸ್ಕೃತರಾಗಲು ಸಾಧ್ಯವೆಂದು ಜಿಲ್ಲಾ ಉರ್ದು ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಜಾಕೀರ್ ಹುಸೈನ್ ಹೇಳಿದರು.

ರಿಪ್ಪನ್‌ಪೇಟೆಯ ಬರುವೆ ಗ್ರಾಮದಲ್ಲಿರುವ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಚಿಲಿಪಿಲಿ’’ ಮತ್ತು ಮಕ್ಕಳ ಆಟಿಕೆ ಸಾಮಾಗ್ರಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

“ಚಿಣ್ಣರ ಚಿಲಿಪಿಲಿ’’ ಕೊಠಡಿ ಮತ್ತು ಎಲ್.ಕೆ.ಜಿ. ಮತ್ತು ಯು‌.ಕೆ.ಜಿ ತರಗತಿಯನ್ನು ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಉದ್ಘಾಟಿಸಿ ಮಕ್ಕಳಲ್ಲಿ ಶಿಕ್ಷಣದೊಂದಿಗೆ ಆಟೋಟಗಳ ಸಾಂಸ್ಕೃತಿಕ ಮನೋರಂಜನೆಗಳು ಕಲಿಕೆಯಲ್ಲಿ ಅಳವಡಿಸಿದರೆ ಶಿಕ್ಷಣದ ಪ್ರಗತಿಗೆ ಪೂರಕವಾಗುವುದೆಂದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಎಸ್.ಆಧ್ಯಕ್ಷ ಮಹ್ಮದ್‌ಅಲಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ, ಹರತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮುಖ್ಯೋಪಾಧ್ಯಾಯ ಗಣಪತಿ, ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ಜಗದೀಶ್ ಕಾಗಿನಲಿ, ಸಮೂಹ ಸಂಪನ್ಮೂಲ ವ್ಯಕ್ತಿ ಮಂಜುನಾಥ, ಶಿಕ್ಷಕರ ಸಂಘದ ನಿರ್ದೇಶಕ ಗಂಗಾನಾಯ್ಕ್, ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯೋಪಾಧ್ಯಾಯ ಉಮೇಶ್ ಹಾಗೂ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ನೀಲಾವತಿ, ಭಾಗವಹಿಸಿ ಮಾತನಾಡಿದರು.

ಶಾಲಾ ವಿದ್ಯಾರ್ಥಿನಿ ಖತೀಜಾ ಪ್ರಾರ್ಥಿಸಿದರು. ಸಹಶಿಕ್ಷಕಿ ಅಸ್ಮಾಭಾನು ಸ್ವಾಗತಿಸಿದರು. ಮುಖ್ಯೋಪಾಧ್ಯಾಯಿನಿ ನೀಲಾವತಿ ಕಾರ್ಯಕ್ರಮ ನಿರೂಪಿಸಿದರು. ಸಾಜಿದಾಬೇಗಮ್ ವಂದಿಸಿದರು.
ನಂತರ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ಜರುಗಿತು.

Leave A Reply

Your email address will not be published.

error: Content is protected !!