ಮೇಲಿನಬೆಸಿಗೆ ಗ್ರಾ.ಪಂ.ಗೆ 2ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

0 264


ಹೊಸನಗರ: ತಾಲ್ಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯತಿಗೆ 2ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಂದು ಗ್ರಾಮ ಪಂಚಾಯತಿ ಆವರಣದಲ್ಲಿ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಶ್ರೀನಿವಾಸ್ ರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ಪೂರ್ಣಿಮ ಸೋಮಶೇಖರ್‌ರವರು ಆಯ್ಕೆಯಾಗಿದ್ದಾರೆ.


ಅಧ್ಯಕ್ಷರ ಚುನಾವಣೆಯಲ್ಲಿ ಶ್ರೀನಿವಾಸ್ ರೆಡ್ಡಿಗೆ 6 ಮತಗಳು ಹಾಗೂ ಇವರ ಪ್ರತಿ ಸ್ಪರ್ಧಿ ಲಕ್ಷ್ಮಣ ಗೌಡ ರವರಿಗೆ ಮೂರು ಮತಗಳು ಬಂದಿದ್ದು ಉಪಾಧ್ಯಕ್ಷೆ ಪೂರ್ಣಿಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಚಂದ್ರಮೌಳಿ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್, ಎರಗಿ ಉಮೇಶ್, ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಹಾಲಗದ್ದೆ ಉಮೇಶ್, ಶುಭಾಕರ್, ಸಣ್ಣಕ್ಕಿ ಮಂಜು, ಟೌನ್ ಘಟಕದ ಅಧ್ಯಕ್ಷ ಗುರುರಾಜ್, ಗೊರಗೋಡು ಜಟ್ಟಿನಮನೆ ನಾಗರಾಜ್, ಧರ್ಮಣ್ಣ, ಗ್ರಾಮ ಪಂಚಾಯತಿಯ ಸದಸ್ಯರುಗಳು ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!