ಹೊಸನಗರ: ಮೊಬೈಲ್ ನಂಬರ್ ಕೊಡುವಂತೆ ಅಪ್ರಾಪ್ತೆಗೆ ಪೀಡಿಸಿದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕಿಯು ಶಾಲಾ ರಜೆ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿರುವ ತನ್ನ ಸ್ವಂತ ಊರಿನಿಂದ ಜಯನಗರ ಸಂಬಂಧಿಕರ ಮನೆಗೆ ಆಗಮಿಸಿದ್ದು ಅಲ್ಲಿಂದ ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದಳು. ಪಟ್ಟಣದ ಚರ್ಚ್ನಲ್ಲಿ ತನ್ನ ತಂಗಿ ಹಾಗೂ ಅಜ್ಜಿಯ ಜೊತೆ ಪ್ರಾರ್ಥನೆ ಸಲ್ಲಿಸಲು ಹೋಗಿದ್ದು, ಮರಳಿ ಮನೆಗೆ ಜಯನಗರಕ್ಕೆ ಹೋಗುವಾಗ ಹೊಸನಗರದ ಬಸ್ ಸ್ಟ್ಯಾಂಡ್ ಬಳಿ ಘಟನೆ ನಡೆದಿದೆ.
ಬೈಕ್ ನಲ್ಲಿ ಬಂದ ಆರೋಪಿಗಳು ಬಾಲಕಿಯರನ್ನು ಎರಡು ಬಾರಿ ಅಡ್ಡಗಟ್ಟಿ ಮೊಬೈಲ್ ನಂಬರ್ ಕೇಳಿದ್ದು ಅಲ್ಲದೇ, ಭೇಟಿ ಮಾಡುವಂತೆ ಒತ್ತಾಯಿಸಿದ್ದಾರೆ. ಬಸ್ ನಿಲ್ದಾಣದವರೆಗೂ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾರೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಪೋಕ್ಸೋ ಕಾಯ್ದೆಯಡಿ ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…
ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…
ರಿಪ್ಪನ್ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…
ರಿಪ್ಪನ್ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…
ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…
ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…