ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ ; ಸರ್ಕಾರಕ್ಕೆ ABVP ವತಿಯಿಂದ ಮನವಿ

0 47


ಹೊಸನಗರ: ಪ್ರಸಕ್ತ ಶೈಕ್ಷಣಕ ವರ್ಷ ಜೂನ್ ಒಂದನೇ ತಾರೀಖಿನಿಂದ ಪ್ರಾರಂಭಗೊಂಡಿದ್ದು, ರಾಜ್ಯ ಸರ್ಕಾರ ತನ್ನ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ’ ಯೋಜನೆ ಜಾರಿಗೊಳಿಸಿದ ಪರಿಣಾಮ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ಹಾಗು ಮನೆಗೆ ವಾಪಸ್ಸಾಗುವ ವೇಳೆ ಬಸ್‌ ಸೌಕರ್ಯ ಇಲ್ಲದೆ ಅನಾನುಕೂಲ ಆಗುತ್ತಿದೆ. ಎಲ್ಲಾ ಸರ್ಕಾರಿ ಬಸ್‌ಗಳು ಈ ವೇಳೆ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದು, ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳಲು ಬಹಳ ತೊಂದರೆ ಆಗುತ್ತಿದೆ. ಆದಕಾರಣ ಈ ಸಮಯದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೆಚ್ಚುವರಿ ಬಸ್ ಸೌಕರ್ಯ ಕಲ್ಪಿಸುವಂತೆ ಕೋರಿ ಹೊಸನಗರ ಎಬಿವಿಪಿ ಘಟಕದ ಮುಖ್ಯಸ್ಥ ಮನೋಜ್ ಹಾಗೂ ಧಾರಿಣಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ತಹಶೀಲ್ದಾರ್ ಡಿ.ಜಿ.ಕೊರಿ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಅಲ್ಲದೆ, ವಿದ್ಯಾರ್ಥಿನಿಯರಿಗೆ ಸರ್ಕಾರ ನೀಡಿರುವ ಉಚಿತ ಸಾರಿಗೆ ಪ್ರಯಾಣ ಶಕ್ತಿ ಯೋಜನೆಯನ್ನು ವಿದ್ಯಾರ್ಥಿಗಳಿಗೂ ವಿಸ್ತರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

Leave A Reply

Your email address will not be published.

error: Content is protected !!