ಸದ್ಗುಣಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ ; ಮಳಲಿ ಶ್ರೀಗಳು

ರಿಪ್ಪನ್‌ಪೇಟೆ: ಬದುಕಿನಲ್ಲಿ ಬಂದದೆಲ್ಲ ಬರಲಿ ಎನ್ನುವುದು ಸಹಜ ಸೂತ್ರ. ಏನು ಬರಬೇಕು ಎಂದು ತೀರ್ಮಾನಿಸಿ ಸೃಷ್ಠಿಕೊಳ್ಳುವುದು ನಿಜವಾದ ಸಾಧನೆ ಎಂದು ಮಳಲಿಮಠದ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು.

ಸಮೀಪದ ಮಳವಳ್ಳಿ ಶ್ರೀಮಹಾಲಿಂಗೇಶ್ವರ ಮತ್ತು ಬಸವಣ್ಣ ದೇವಸ್ಥಾನದ ನೂತನ ಕಟ್ಟಡದ ಲೋಕಾರ್ಪಣೆ ಮತ್ತು ಶ್ರೀ ಮಹಾಲಿಂಗೇಶ್ವರ ಶ್ರೀಬಸವಣ್ಣ ದೇವರುಗಳ ಪುನರ್ ಪ್ರತಿಷ್ಟಾಪನಾ ಧರ್ಮ ಸಮಾರಂಭದ ದಿವ್ಯಸಾನಿದ್ಯ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿ, ಸದ್ಗುಣಗಳನ್ನು ಬದುಕಿನಲ್ಲಿ ಆಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿಯಾಗಲು ಸಾಧ್ಯ. ದೇವಸ್ಥಾನ ನಿರ್ಮಿಸಿದರೆ ಸಾಲದು ಸ್ವಚ್ಚತೆಯೊಂದಿಗೆ ಕಾಯಕ ನಿಷ್ಟರಾಗಿ ಬದುಕುವಂತಾಗಬೇಕು. ಧಾನ ಧರ್ಮದೊಂದಿಗೆ ಸಂತೃಪ್ತಿಯಿಂದ ಜೀವನ ನಡೆಸುವಂತಾಗಬೇಕು. ಕಣದ ದೇವರುಗಳನ್ನು ಗುರುವಿನಲ್ಲಿ ಕಾಣುವಂತಾದಾಗ ಮಾತ್ರ ಧರ್ಮ ಉಳಿಯಲು ಸಾಧ್ಯವಾಗುವುದೆಂದು ಹೇಳಿ ನಾನು ನಂದು ಅನ್ನುವ ಅಹಂಕಾರ ಭಾವವನ್ನು ಬಿಟ್ಟಾಗಲೇ ಕಲಿಯಲು ಮತ್ತು ಬೆಳೆಯಲು ಸಾಧ್ಯ ಆದ್ದರಿಂದ ಈ ಭಗವಂತನ ಸೃಷ್ಠಿಯಲ್ಲಿ ನಾವೆಲ್ಲರು ಕಿಂಕರರಾಗಿ ಬದುಕುವುದು ಬಹಳ ಶ್ರೇಷ್ಠ. ಹಾಗಾಗಿ ಶ್ರೀಗುರುವಿಗೆ ತಂದೆ ತಾಯಿಯರಿಗೆ ಗೌರವಿಸಿ ಬದುಕು ಸಾಗಿಸುವುದರ ಜೊತೆಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಮನುಕುಲ ಉದ್ದಾರದ ಧರ್ಮಸೂತ್ರಗಳನ್ನು ಅಳವಡಿಸಿಕೊಂಡು ಜೀವನ ಸಾಗಿಸುವುದೆ ನಿಜವಾದ ಜೀವನವಾಗಿದೆ. ಹಣ ಸೌಂದರ್ಯ ಯಾವುದು ಶಾಶ್ವತವಲ್ಲ. ಧರ್ಮವೊಂದೆ ಶಾಶ್ವತವೆಂದರು.

ಧರ್ಮ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀಮಹಾಲಿಂಗೇಶ್ವರ ಮತ್ತು ಬಸವಣ್ಣ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ನಾಗರಾಜಗೌಡರು ವಹಿಸಿದ್ದರು.

ಬ್ರಹ್ಮಶ್ರೀನಾರಾಯಣಗುರು ಮಹಾಸಂಸ್ಥಾನಮಠದ ರೇಣುಕಾನಂದ ಮಹಾಸ್ವಾಮಿಜಿ ಸಾನಿಧ್ಯ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಹೊನಗೋಡು ರತ್ನಾಕರ್, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಆಲವಳ್ಳಿ ವೀರೇಶ್, ನವಚೇತನ ವೇದಿಕೆ ಅಧ್ಯಕ್ಷ ಕೆ.ಎಸ್.ಪ್ರಶಾಂತ್, ಸಿಡಿಸಿ ಉಪಾಧ್ಯಕ್ಷ ಹಾಲಸ್ವಾಮಿಗೌಡ, ಗ್ರಾಮ ಪಂಚಾಯ್ತಿ ಸದಸ್ಯ ಚಂದ್ರಶೇಖರ ಮಳವಳ್ಳಿ, ಡಿ.ಈ. ಮಧುಸೂದನ್, ಉಮಾಕರ್, ಕವಿತಾ ಭೀಮರಾಜ್, ವೆಂಕಟೇಶ್, ಚನ್ನಪ್ಪಗೌಡ, ಗೋವಿಂದಪ್ಪ, ಈಶ್ವರಪ್ಪ, ಸತ್ಯನಾರಾಯಣ ಇನ್ನಿತರರು ಪಾಲ್ಗೊಂಡಿದ್ದರು.

ಶಕುಂತಲ ಪ್ರಾರ್ಥಿಸಿದರು. ಈಶ್ವರಪ್ಪ ಮಳವಳ್ಳಿ ಸ್ವಾಗತಿಸಿದರು. ಸತ್ಯನಾರಾಯಣ ನಿರೂಪಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

21 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago