ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರ ಒಲವಿರಲಿ ; ಶಾಸಕ ಗೋಪಾಲಕೃಷ್ಣ ಬೇಳೂರು

0 236

ರಿಪ್ಪನ್‌ಪೇಟೆ: ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ.
ಸರ್ಕಾರಿ ಶಾಲೆಗಳ ಪುನಸ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಪಟ್ಟಣದ ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲಮನೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

ಬಾಲ್ಯದಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯಕ್ಕೆ ಬುನಾದಿ ಕಟ್ಟಿಕೊಡಬೇಕು ಎಂದರು.

ಖಾಸಗಿ ಶಾಲೆಗಳ ವ್ಯಾಮೋಹವನ್ನು ಬಿಟ್ಟು, ಸರ್ಕಾರಿ ಶಾಲೆಗಳ ಕಡೆ ಮುಖ ಮಾಡುವ ಮೂಲಕ, ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪೂರಕವಾದ ಯೋಜನೆಯ ಅನುಷ್ಠಾನದ ಪ್ರಯೋಜನ ಪಡೆದುಕೊಳ್ಳುವಂತೆ ಕಿವಿಮಾತು ಹೇಳಿದರು.

ಎಸ್ ಡಿಎಂಸಿ ಅಧ್ಯಕ್ಷ ಬಾಲಚಂದ್ರ ಎನ್.
ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ, ಬಾಳೂರು ಗ್ರಾಪಂ ಅಧ್ಯಕ್ಷ ಶ್ರೀನಿವಾಸ್ ಆಚಾರ್, ಉಪಾಧ್ಯಕ್ಷೆ ಪ್ರೀತಿ ರಾಘು, ಸದಸ್ಯರಾದ ರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಶಿಕ್ಷಣ ಇಲಾಖೆಯ ಮಂಜುನಾಥ್ ಶಾಲೆಯ ಮುಖ್ಯೋಪಾಧ್ಯಾಯ ಟಿ. ದಾನೇಶಪ್ಪ, ಶಿಕ್ಷಕಿ ವನಜಾಕ್ಷಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಲೇಶ್ ಮತ್ತು ಇತರರು ಇದ್ದರು.

Leave A Reply

Your email address will not be published.

error: Content is protected !!