Categories: Hosanagara News

ಹಾಲು ಸಹಕಾರಿ ಒಕ್ಕೂಟದಿಂದ 45 ದಿನ 20% ಕಡಿಮೆ ದರದಲ್ಲಿ ಸಿಹಿ ಉತ್ಸವ ; ವಿದ್ಯಾಧರ್


ಹೊಸನಗರ: ಶಿವಮೊಗ್ಗ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ 45 ದಿನಗಳ ಕಾಲ ನಂದಿನಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ನಂದಿನಿ ಘಟಕದಿಂದ ಉತ್ಪಾದಿಸಿಸುವ ಸಹಿ ವಸ್ತುಗಳ ಬೆಲೆಯಲ್ಲಿ 20% ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ನೀಡಲಾಗುತ್ತದೆ ಎಂದು ಶಿವಮೊಗ್ಗ ಹಾಲು ಒಕ್ಕೂಟದ ನಿರ್ದೇಶಕ ವಿದ್ಯಾಧರ್‌ರವರು ಹೇಳಿದರು.


ಹೊಸನಗರ ಬಸ್ ನಿಲ್ದಾಣ ಎದುರಿರುವ ಸರ್ಕಾರಿ ಪಶು ಆಸ್ಪತ್ರೆಯ ಮುಂಭಾಗ ರಮೇಶ್ ಶೆಟ್ಟಿಯವರ ಹಾಲಿನ ಡೈರಿಯ ಆವರಣದಲ್ಲಿ ನಂದಿನಿ ಸಹಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ರೈತರ ಹಣ ರೈತರಿಗೆ ನಮ್ಮ ಒಕ್ಕೂಟ ನೀಡುತ್ತಿದ್ದು 45 ದಿನಗಳ ಕಾಲದಲ್ಲಿ 20% ಕಡಿಮೆ ದರದಲ್ಲಿ ಸಹಿ ಮಾರಾಟ ಮಾಡುತ್ತಿದ್ದು ಬಂದಂತಹ ಲಾಭಾಂಶವನ್ನು ರೈತರಿಗೆ ನೀಡುವ ಈ ಯೋಜನೆಯಾಗಿದ್ದು 45 ದಿನಗಳ ಕಾಲ ನಂದಿನಿ ಮಾರಾಟಗಾರರ ಅಂಗಡಿಗಳಲ್ಲಿ ಈ ಸೌಲಭ್ಯ ಲಭ್ಯವಿದ್ದು ಸಾರ್ವಜನಿಕರು ಹಾಗೂ ಗ್ರಾಹಕರು ಇದರ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.


ಈ ಸಿಹಿ ಉತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾರ್ಕೆಟಿಂಗ್ ಮ್ಯಾನೆಂಜರ್ ಪ್ರಮೋದ್ ಬಿ.ಕೆ, ಮಾರ್ಕೆಟಿಂಗ್ ಮ್ಯಾನೆಂಜರ್ ಬಸವರಾಜ್, ಸರ್ಕಾರಿ ಪಶು ಆಸ್ಪತ್ರೆಯ ವೈದ್ಯಾಧಿಕಾರಿ ನಾಗರಾಜ್, ಮಲ್ಲಿಕಾರ್ಜುನ್, ಬೂತ್ ಮಾಲೀಕರಾದ ರಮೇಶ್ ಶೆಟ್ಟಿ, ಆನಂತ, ರಾಘವೇಂದ್ರ, ಉದಯ, ಪ್ರಶಂತ, ಅಖಿಲೇಶ್, ಪಾಂಡುರಂಗ ಶೆಣೈ, ಜಗದೀಶ, ಹೆಚ್.ಎನ್ ನಿತ್ಯಾನಂದ ಗ್ರಾಹಕರಾದ ಹೆಚ್.ಎಂ ನಿತ್ಯಾನಂದ, ಮನೋಧರ, ಪ್ರಶಾಂತ ಗೌತಮ್ ಕುಮಾರಸ್ವಾಮಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

8 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

8 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

8 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

9 hours ago

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

11 hours ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

14 hours ago