ಹಿಂದುಸ್ತಾನವನ್ನು ಒಗ್ಗೂಡಿಸಲು ಶ್ರಮಿಸಿದವರು ಛತ್ರಪತಿ ಶಿವಾಜಿ ಮಹಾರಾಜ‌ ; ವಿನಯ್ ಎಂ ಆರಾಧ್ಯ

0 37


ಹೊಸನಗರ: ಸ್ವಾಭಿಮಾನಿ ರಾಷ್ಟ್ರ ನಿರ್ಮಾಣಕ್ಕೆ ಹೋರಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದುಸ್ತಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದವರು ಎಂದು ಹೊಸನಗರ ತಾಲ್ಲೂಕು ಚುನಾವಣೆ ಶಿರಾಸ್ಥೆದಾರ್ ವಿನಯ್ ಎಂ ಆರಾಧ್ಯರವರು ಹೇಳಿದರು.


ಹೊಸನಗರ ತಾಲ್ಲೂಕು ಕಛೇರಿಯ ಆವರಣದಲ್ಲಿ ಮಹಾರಾಜ ಛತ್ರಪತಿ ಶಿವಾಜಿಯವರ ಜಯಂತಿಯನ್ನು ಆಚರಿಸಲಾಗಿದ್ದು ಶಿವಾಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮ ಭಾರತವನ್ನು ತಮ್ಮ ಆಳ್ವಿಕೆಗೆ ತಂದು ಶಿವಾಜಿಯ ಶೌರ್ಯ ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣೆಯಾಗಿತ್ತು. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಮಂಕ್ತಿಯಲ್ಲಿ ನಿಂತಿದೆ ಎಂದರು.


ಈ ಸಂದರ್ಭದಲ್ಲಿ ತಾಲ್ಲೂಕು ಕಛೇರಿಯ ಪ್ರಥಮ ದರ್ಜೆ ಗುಮಾಸ್ತರಾದ ಚಿರಾಗ್, ಮೇಘನಾ, ಶಿವಾಜಿ ಛತ್ರಪತಿ ಸಂಘದ ಅಧ್ಯಕ್ಷರಾದ ಅಶೋಕ್ ಎಂ.ಎಸ್, ರವಳೋಜಿ ರಾವ್, ಸಿದ್ದೋಜಿರಾವ್ ರಾಕೇಶ್, ಅಜೀತ್, ನಾಗರಾಜ್ ಕಿಣಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!