ಹುಂಚ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ !

0 2,559

ರಿಪ್ಪನ್‌ಪೇಟೆ : ಹುಂಚ ಮುತ್ತಿನಕೆರೆಯಲ್ಲಿ ಅಪರಿಚಿತ ಮಹಿಳೆಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಸೋಮವಾರ ಮಧ್ಯಾಹ್ನ ಪತ್ತೆಯಾಗಿದೆ.

ಮೃತದೇಹಕ್ಕೆ ಹಗ್ಗದ ಸಹಾಯದಿಂದ ಕಲ್ಲುಕಂಬವನ್ನು ಕಟ್ಟಿ ಕೆರೆಗೆ ಎಸೆದಿರುವ ರೀತಿ ಕಂಡು ಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಮೂರ್ನಾಲ್ಕು ದಿನದ ಹಿಂದೆ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಕೆರೆಯಿಂದ ಹೊರತೆಗೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೆರೆಯ ಸುತ್ತಮುತ್ತ ನೂರಾರು ಜನರು ಜಮಾಯಿಸಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave A Reply

Your email address will not be published.

error: Content is protected !!