ಹೊಸನಗರಕ್ಕೆ ಪ್ರತ್ಯೇಕ ವಿಧಾನಸಭಾ ಕ್ಷೇತ್ರ ರಚಿಸಿ ; ಸಿಎಂಗೆ ಪತ್ರ

0 54

ಹೊಸನಗರ: ಹೊಸನಗರ ಮುಳುಗಡೆ ಸಂತ್ರಸ್ಥ ತಾಲೂಕಾಗಿದ್ದು, ತನ್ನ ವಿಧಾನಸಭಾ ಕ್ಷೇತ್ರ ಕಳೆದುಕೊಂಡಿದ್ದು, ಜನಸಾಮಾನ್ಯರಿಗೆ ಶಾಪವಾಗಿ ಪರಿಣಮಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯ ಒಳಗಾಗಿ ಹೊಸನಗರ ತಾಲೂಕು ವಿಧಾನಸಭಾ ಕ್ಷೇತ್ರ ಮಾನ್ಯತೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪತ್ರದ ಮೂಲಕ ತಾಲೂಕು ಗ್ರಾಮ ಪಂಚಾಯಿತಿ ಅಧ್ಯಕ್ಷರ ಒಕ್ಕೂಟ ಒತ್ತಾಯಿಸಿದೆ.


ಈ ವಿಷಯಕ್ಕೆ ಸಂಬಂಸಿದಂತೆ ಒಕ್ಕೂಟದ ಅಧ್ಯಕ್ಷ ಎಚ್.ಬಿ.ಚಿದಂಬರ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ತಾಲೂಕಿನಲ್ಲಿ ಸುಮಾರು 29 ಸಾವಿರ ಕುಟುಂಬಗಳಿವೆ. ಒಂದೂವರೆ ಲಕ್ಷ ಜನಸಂಖ್ಯೆ ಹೊಂದಿದೆ. 2008ರಲ್ಲಿ ನಡೆದ ಕ್ಷೇತ್ರ ಪುನರ್ ವಿಂಗಡಣೆ ವೇಳೆ ಕ್ಷೇತ್ರ ಮರು ಹಂಚಿಕೆ ಅವೈಜ್ಞಾನಿಕವಾಗಿ ನಡೆದ ಕಾರಣಕ್ಕೆ ಕ್ಷೇತ್ರ ಕಳೆದುಕೊಳ್ಳುವಂತಾಯಿತು. ಇದರಿಂದ ತಾಲೂಕಿನ ಜನತೆ ರಾಜಕೀಯ ಉದ್ದೇಶಗಳಿಗೋಸ್ಕರ ಸಾಗರ ಹಾಗೂ ತೀರ್ಥಹಳ್ಳಿಯನ್ನು ಅವಲಂಬಿಸುವಂತಾಗಿದೆ. ಜನಸಾಮಾನ್ಯರಿಗೆ ತೀವ್ರ ಅನಾನುಕೂಲವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


ಕಾನೂನು ಹಾಗೂ ಸಂಸದೀಯ ಸಚಿವಾಲಯ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. 2008ಕ್ಕೂ ಪೂರ್ವದಲ್ಲಿದ್ದ ಮಾದರಿಯಲ್ಲಿ ಹೊಸನಗರ ತಾಲೂಕನ್ನು ಮತ್ತೊಮ್ಮೆ ವಿಧಾನಸಭಾ ಕ್ಷೇತ್ರವನ್ನಾಗಿ ಪುನರಚನೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Leave A Reply

Your email address will not be published.

error: Content is protected !!