Categories: Hosanagara News

ಹೊಸನಗರದಲ್ಲಿ ಸಂಭ್ರಮದ 77ನೇ ಸ್ವಾತಂತ್ರ್ಯ ದಿನಾಚರಣೆ


ಹೊಸನಗರ: 77 ವರ್ಷಗಳ ಹಿಂದೆ ಭಾರತ ದೇಶದ ಜನರು ಬ್ರಿಟಿಷರ ಆಡಳಿತ ದಬ್ಬಾಳಿಕೆಯಿಂದ ಕಂಗೆಟ್ಟು ಹೋಗಿದ್ದ ಸಂದರ್ಭದಲ್ಲಿ ನಮ್ಮ ದೇಶದ ಮಹಾನಾಯಕರ ಸ್ವಾತಂತ್ಯ ಹೋರಾಟಗಾರರ ನೇತೃತ್ವವನ್ನು ಮಹಾತ್ಮ ಗಾಂಧೀಜಿಯವರು ವಹಿಸಿ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟ ಈ ದಿನ ಶುಭ ದಿನವಾಗಿದೆ ಎಂದು ಹೊಸನಗರ ಪ್ರಭಾರ ತಹಶಿಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ರವರು ಹೇಳಿದರು.

ಪಟ್ಟಣದ ನೆಹರು ಮೈದಾನದಲ್ಲಿ 77ನೇ ಸ್ವಾತಂತ್ರ್ಯೋವದ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದ ಅವರು, ಇಂದು ದೇಶ ಸ್ವಾತಂತ್ರ್ಯೋವದ ಅಮೃತ ಮಹೋತ್ಸವದ ಸಡಗರದಲ್ಲಿದ್ದೇವೆ. ದೇಶದಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬ್ರಿಟೀಷರ ದಾಸ್ಯದಿಂದ ಭಾರತ ಮಾತೆ ಸ್ವಾತಂತ್ರ್ಯಗೊಂಡ ಶುಭ ದಿನ ಈಸ್ಟ್ ಇಂಡಿಯಾ ಕಂಪೆನಿಯ ಹೆಸರಲ್ಲಿ ದೇಶಕ್ಕೆ ಕಾಲಿರಿಸಿ ನಂತರ ಇಡೀ ದೇಶವನ್ನೇ ಸ್ವಾಧೀನಪಡಿಸಿದ ಬ್ರಿಟೀಷರಿಂದ ಮುಕ್ತಿ ಪಡೆದ ಸುದಿನ ಎಂದರು.


ಈ ದೇಶವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಮುಕ್ತಿಗೊಳಿಸಲು ಸಾವಿರಾರು ಭಾರತೀಯ ತಮ್ಮ ತನು, ಮನ, ಧನ ತ್ಯಾಗ ಮಾಡಿದ್ದಾರೆ ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಸಾವಿರಾರು ದೇಶಪ್ರೇಮಿಗಳ ಬಲಿದಾನವಿದೆ‌. ಮಹಾತ್ಮ ಗಾಂಧಿ, ಜವಾಹರ ಲಾಲ್ ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್, ಭಗತ್ ಸಿಂಗ್, ನೇತಾಜಿ ಸಭಾಷ್ ಚಂದ್ರ ಬೋಸ್, ಕಿತ್ತೂರು ರಾಣಿ ಚೆನ್ನಮ್ಮ, ಬೆಳವಡಿ ಮಲ್ಲಮ್ಮ , ಸಂಗೊಳ್ಳಿ ರಾಯಣ್ಣ, ಮೈಲಾರ ಮಹಾಲಿಂಗ ಸೇರಿದಂತೆ ನೂರಾರು ಹೋರಾಟಗಾರರ ಪರಿಶ್ರಮದ ಫಲವಾಗಿ ನಾವಿಂದು ಸ್ವಾತಂತ್ರ್ಯದ ಸವಿಯನ್ನು ಉಣ್ಣುತ್ತಿದ್ದೇವೆ.
ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನಾವು ಎದುರಿಸಿದ್ದ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂದು ನಮಗೆ ಸಾಧ್ಯವಾಗಿದೆ ಎಂದು ಹೇಳಲು ಹೆಮ್ಮೆ ಎನಿಸುತ್ತಿದೆ. ಬಡತನ, ಅನಕ್ಷರತೆ, ನಿರುದ್ಯೋಗ ಸಮಸ್ಯೆಗಳನ್ನು ಯಶಸ್ವಿಯಾಗಿ ಎದುರಿಸಿದ್ದೇವೆ. ಆಹಾರ ಉತ್ಪಾದನೆಯಲ್ಲಿ ನಾವು ಸ್ವಾವಲಂಬನೆಯನ್ನು ಸಾಧಿಸಿದ್ದೇವೆ.

ಸಾಮಾಜಿಕ ಸಮಾನತೆಯ ತಳಹದಿಯ ಮೇಲೆ ರಚಿಸಲಾಗಿರುವ ನಮ್ಮ ಸಂವಿಧಾನ, ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವ ಮೂಲಕ ಸಾಮಾಜಿಕ ಸುಧಾರಣೆಗೆ ನಾದ ಹಾಡಿದೆ. ಸರ್ವಧರ್ಮ ಸಹಿಷ್ಣುತೆಯ ತತ್ವದಡಿಯಲ್ಲಿ ಎಲ್ಲರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯ ದೊರಕಿಸಲು ಸಾಧ್ಯವಾಗಿರುವುದು ನಮ್ಮ ಹೆಗ್ಗಳಿಕೆಯಾಗಿದೆ ಎಂದರು‌.

ಶರಣರು, ಸಂತರಿಗೆ ಜನ್ಮ ನೀಡಿದ ನಮ್ಮ ಕನ್ನಡನಾಡು ಶಾಂತಿಯ ಬೀಡು. ನಮ್ಮ ರಾಜ್ಯ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿಯನ್ನು ಸಾಧಿಸಿದ್ದು, ಹಲವು ಕ್ಷೇತ್ರಗಳಲ್ಲಿ ದೇಶಕ್ಕೆ ಮಾದರಿಯಾಗಿದೆ. ವಿಜ್ಞಾನ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದ್ದು ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಕನಡನಾಡಿನ ಹೋರಾಟಗಾರರ ತಮ್ಮ ತನು, ಮನ, ಧನವನ್ನು ತ್ಯಾಗ ಮಾಡಿ ಅಮರರಾಗಿದ್ದಾರೆ. ಸ್ವಾತಂತ್ರ್ಯ ಚಳವಳಿಯಲ್ಲಿ ಶಿವಮೊಗ್ಗ ಜಿಲ್ಲೆಯೂ ಬಹು ಮುಖ್ಯ ಪಾತ್ರ ವಹಿಸಿತ್ತು.

ಶಿವಮೊಗ್ಗ ಜಿಲ್ಲೆಯ ಈಸೂರು ಗ್ರಾಮ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿತ್ತು. ಈಸೂರು ಹೋರಾಟದಲ್ಲಿ ಭಾಗವಹಿಸಿದ್ದ 5 ಸ್ವಾತಂತ್ರ್ಯ ಸೇನಾನಿಗಳು ನೇಣಿಗೆ ಕೊರಳೊಡ್ಡಿ ಹುತಾತ್ಮರಾದರು. ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರು, ತಾಯಂದಿರ ಪಾತ್ರವೂ ಮುಖ್ಯವಾಗಿತ್ತು. ಇಂಗ್ಲೀಷ್ ಈಸ್ಟ್ ಇಂಡಿಯಾ ಕಂಪನಿಯ ವ್ಯಾಪಾರಿಗಳಾಗಿ ಭಾರತಕ್ಕೆ ಬಂದ ಬ್ರಿಟೀಷರು ಪ್ಲಾಸಿ ಕದನದಲ್ಲಿ ವಿಜಯ ಸಾಧಿಸಿ, ಸುಮಾರು 190 ವರ್ಷಗಳ ಕಾಲ ಭಾರತವನ್ನು ಆಳಿದರು ಹಾಗೂ ನಮ್ಮ ದೇಶದ ಅಪಾರ ಸಂಪತ್ತನ್ನು ಕೊಳ್ಳೆಹೊಡೆದರು. ಮಹಾತ್ಮ ಗಾಂಧಿಜೀಯವರಂತಹ ಅಹಿಂಸಾತ್ಮಕ ಹೋರಾಟಗಾರರು ಸುಭಾಷ್ ಚಂದ್ರ ಭೋಸ್ ರಂತಹ ಮೀಲಿಟರಿ ಹೋರಾಟ ಹಾಗೂ ಭಗತ್ ಸಿಂಗ್‌ರವರಂತರ ಕ್ರಾಂತಿಕಾರಿ ಹೋರಾಟಗಳು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪಥವನ್ನು ಸುಗಮಗೊಳಿಸಿದವು. 2ನೇ ಪ್ರಪಂಚ ಯುದ್ದದಲ್ಲಿ ಜರ್ಝರಿತಗೊಂಡಿದ್ದು ಬ್ರಿಟೀಷರಿಗೆ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಹೆಚ್ಚು ಕಾಲ ಅದುಮಿಡಲು ಸಾಧ್ಯವಿರಲಿಲ್ಲ ಎಂದರು.


ಅಂತಿಮವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ನೇತೃತ್ವದಲ್ಲಿ 1947 ಆಗಸ್ಟ್ 15 ರಂದು ನಮಗೆ ಸ್ವಾತಂತ್ರ್ಯ ಲಭಿಸಿತು.‌ಈ ಶುಭ ದಿನದ ಸ್ಮರಣೆಗಾಗಿ ನಮ್ಮ ದೇಶದಲ್ಲಿ ಪ್ರತಿವರ್ಷವು ರಾಷ್ಟ್ರೀಯ ಹಬ್ಬವನ್ನಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತೇವೆ. ನಮ್ಮ ದೇಶವು ಬಹು ಸಾಂಸ್ಕೃತಿಕ ಬೀಡಾಗಿದೆ. ಆಚಾರ-ವಿಚಾರ, ರೂಢಿ-ಸಂಪ್ರದಾಯಗಳಲ್ಲಿ ಭಿನ್ನತೆ ಇದ್ದರೂ ಕೂಡ ಹಲವಾರು ಜನಾಂಗದಿಂದ ಕೂಡಿದ ಏಕ ಜನಾಂಗದ ರಾಷ್ಟ್ರವಾಗಿದೆ. ಸ್ವಾತಂತ್ರ್ಯ ಭಾರತದಲ್ಲಿ ಇಂದಿಗೂ ಸಹ ಹಲವು ಕಡೆಗಳಲ್ಲಿ ನಾವು ಅಸಮಾನತೆ ದೌರ್ಜನ್ಯ ಮಹಿಳೆಯರ ಮೇಲಿನ ಎಲ್ಲಾ ತರಹದ ಕಿರುಕುಳಗಳು, ಆಸಿಡ್ ದಾಳಿ, ಭ್ರಷ್ಟಚಾರ ಇವೆಲ್ಲವನ್ನೂ ನೋಡಿದರೆ ಇದಕ್ಕೆ ಕೊನೆಯೆಂದು? ಸಹಕಾರ ಮನೋಭಾವಗಳನ್ನು ಭಾರತೀಯರು ಬೆಳೆಸಿಕೊಳ್ಳಬೇಕಾಗಿದೆ‌. ಇಂದಿನ ಯುವಕರು ನಮ್ಮ ಅದುನಿಕ ಬದುಕಿನಲ್ಲಿ ಹಾಳು ಮಾಡುವ ಸಾಧನವಾಗಿ ಉಪಯೋಗಿಸುತ್ತಿದ್ದು ಈ ನಿಟ್ಟಿನಲ್ಲಿ ನಾವೆಲ್ಲರೂ ಆಧುನಿಕ ತಂತ್ರಜ್ಞಾನದ ಸದ್ಬಳಿಕೆಗಳ ನಮ್ಮ ಮಕ್ಕಳಿಗೆ ತಿಳಿ ಹೇಳುವ ಹಾಗೂ ಉತ್ತಮ ಸಮಾಜವನ್ನು ನಿರ್ಮಿಸುವ ಜವಬ್ದಾರಿ ನಮ್ಮ ಮೇಲಿದೆ. ನಮ್ಮ ಯುವ ಪೀಳಿಗೆ ಇಂದು ಗಾಂಜಾ, ತಂಬಾಕು ಪದಾರ್ಥಗಳ ವ್ಯಸನಿಗಳಾಗಿದ್ದು ಈ ಯುವ ಸಮಾಜವನ್ನು ದುಶ್ಚಟಗಳಿಗೆ ಬಲಿಯಾಗದಂತೆ ಹಾಗೂ ಒಳ್ಳೆಯ ಆದರ್ಶ ಜೀವನದ ಹಾದಿ ತೋರಿಸುವ ಜವಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.


ಈ ಸಮಾರಂಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಪೊಲೀಸ್ ವೃತ್ತ ನಿರೀಕ್ಷಕರಾದ ಗಿರೀಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಾಲಚಂದ್ರಪ್ಪ ಟಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಬಸವಣ್ಯಪ್ಪ, ನಾಡ ಹಬ್ಬಗಳ ಸಮಿತಿಯ ಸದಸ್ಯರಾದ ಶ್ರೀನಿವಾಸ್ ಕಾಮಾತ್, ಶ್ರೀಧರ ಉಡುಪ, ರಾಜಮೂರ್ತಿ, ರಾಜುಶೆಟ್ಟಿ, ವರ್ತಕರ ಸಂಘದ ಅಧ್ಯಕ್ಷರಾದ ವಿಜೇಂದ್ರ ಶೇಟ್, ಪ್ರಥಮ ದರ್ಜೆ ಗುಮಾಸ್ಥರಾದ ಚಿರಾಗ್, ಮಂಜುನಾಥ್ ಕಟ್ಟೆ, ಸುಧೀಂದ್ರಕುಮಾರ್, ರೆವಿನ್ಯೂ ಇನ್ಸ್‌ಪೆಕ್ಟರ್ ರೇಣುಕಯ್ಯ, ತಾಲ್ಲೂಕು ಕಛೇರಿಯ ಎಲ್ಲ ಸಿಬ್ಬಂದಿಗಳು, ಹಾಲಗದ್ದೆ ಉಮೇಶ್, ಗುಲಾಬಿ ಮರಿಯಪ್ಪ, ಕೃಷ್ಣವೇಣಿ, ಪಟ್ಟಣ ಪಂಚಾಯಿತಿಯ ಎಲ್ಲ ನೌಕರ ವರ್ಗ, ಪಟ್ಟಣ ಪಂಚಾಯಿತಿಯ ಎಲ್ಲ ಸದಸ್ಯರು, ಹೊಸನಗರ ಶಾಲೆಗಳ ಎಲ್ಲ ಶಿಕ್ಷಕರ ವೃಂದ, ಸರ್ಕಾರಿ ನೌಕರರ ಬಳಗ ಇನ್ನೂ ಮುಂತಾದವರು ಉಪಸ್ಥಿತರಿದ್ದು 77ನೇ ಸ್ವಾತಂತ್ರ್ಯೋತ್ಸವಕ್ಕೆ ಶುಭ ಕೋರಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

8 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

12 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

12 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

14 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

15 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

22 hours ago