ಹೊಸನಗರದ ವಿವಿಧಡೆ 9ನೇ ರಾಷ್ಟ್ರೀಯ ಯೋಗ ದಿನಾಚರಣೆ

0 38

ಹೊಸನಗರ : ಪಟ್ಟಣದ ಪೂರ್ವ ಪ್ರಾಥಮಿಕ ಶಾಲೆಯಾದ ಶ್ರೀ ವಿದ್ಯಾ ಸನ್ನಿಧಾನಂ, ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜೆಎಂಎಫ್‌ಸಿ ನ್ಯಾಯಾಲಯ ಹಾಗೂ ವಿವಿಧಡೆಗಳಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ವಿದ್ಯಾ ಸನ್ನಿಧಾನಂನಲ್ಲಿ ಪುಟಾಣಿಗಳು ಯೋಗ ಆಚರಣೆಯಲ್ಲಿ ಸಂಭ್ರಮದಿಂದ ಪಾಲ್ಗೊಂಡು ಸಂಭ್ರಮಿಸಿದರೆ. ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಹಿರಿಯ ವ್ಯವಹಾರ ನ್ಯಾಯಾಧೀಶರಾದ ಕೆ. ರವಿಕುಮಾರ್ ಹಾಗೂ ನಾಜಿರಾ ಬೇಗಂ ತಮ್ಮ ಕಚೇರಿ ಸಿಬ್ಬಂದಿಗಳು ಹಾಗೂ ವಕೀಲರ ಸಂಘದ ಪದಾಧಿಕಾರಿಗಳೊಂದಿಗೆ ಹಾಗೂ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯ ಅಂಜನ್ ಕುಮಾರ್ ಹಾಗೂ ಎನ್ಎಸ್ಎಸ್ ಘಟಕದ ಪದಾಧಿಕಾರಿಗಳು ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಯೋಗಕ್ಕೆ ಜಾಗತಿಕ ಮಾನ್ಯತೆ ದೊರಕಬೇಕು ಯೋಗದ ಬಗ್ಗೆ ಜನರಿಗೆ ಅರಿವು ಮೂಡಿಸಲು ಮತ್ತು ಅದನ್ನು ಮಾನವನ ಅಭಿವೃದ್ಧಿಗೆ ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ಜನಜಾಗ್ರತೆಗೊಳಿಸುವ ನಿಟ್ಟಿನಲ್ಲಿ ಯೋಗ ದಿನಾಚರಣೆ ಆಚರಿಸುತ್ತಿದ್ದೇವೆ. ಯೋಗದಿಂದ ಎಲ್ಲ ಜನರ ಆರೋಗ್ಯ ಮತ್ತು ಜೀವನ ಮಟ್ಟ ಸುಧಾರಣೆ ಸಾಧ್ಯ ಯೋಗ ಎಲ್ಲವನ್ನು ಒಗ್ಗೂಡಿಸುತ್ತದೆ ಯೋಗವು ಶಕ್ತಿ ಸೌಹಾರ್ದ ಮತ್ತು ಶಾಂತಿಯ ಸಂಕೇತವಾಗಿದೆ.

ಇದು ಮಾನಸಿಕ ಸ್ವಾಸ್ಥ್ಯವನ್ನು ವೃದ್ಧಿಸಲಿದೆ ಹಾಗೂ ಎಲ್ಲರನ್ನೂ ಒಗ್ಗೂಡಿಸುತ್ತದೆ ಯೋಗ ಆಧ್ಯಾತ್ಮಿಕ ದೃಷ್ಟಿಯಿಂದ ದೇಹ ಮನಸ್ಸು ಮತ್ತು ಆತ್ಮಗಳ ಬೆಸುಗೆ ಮಾಡಲಿದೆ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಅನಿವಾರ್ಯವಾಗಿದೆ ಎಂದರು.

Leave A Reply

Your email address will not be published.

error: Content is protected !!