Categories: Hosanagara News

ಹೊಸನಗರ ಪಟ್ಟಣದ ವಿವಿಧೆಡೆ ಸಂಭ್ರಮದ 77ನೇ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ : ಪಟ್ಟಣದಾದ್ಯಂತ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಬ್ಬದ ವಾತಾವರಣ ನಿರ್ಮಾಣಗೊಂಡಿದ್ದು ಎಲ್ಲ ಸರ್ಕಾರಿ ಕಚೇರಿ, ಹೋಟೆಲ್, ಅಂಗಡಿ ಮುಂಗಟ್ಟು, ವಾಹನಗಳ ಹಾಗೂ ಮನೆಗಳ ಮೇಲೆ ತ್ರಿವರ್ಣ ಧ್ವಜ ರಾರಾಜಿಸುತ್ತಿದ್ದಿದ್ದು ಕಂಡುಬಂದಿತು.

ಪಟ್ಟಣ ಪಂಚಾಯತಿ ಆವರಣದಲ್ಲಿ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವನ್ನು ಆಡಳಿತಾಧಿಕಾರಿ ತಹಶೀಲ್ದಾರ್ ರಾಕೇಶ್ ಫಾನ್ಸಿಸ್ ಬ್ರೀಟೋರವರು ನೆರವೇರಿಸಿದರು. ಈ ಸಂದರ್ಭದಲ್ಲಿಪಟ್ಟಣ ಪಂಚಾಯತಿಯ ಎಲ್ಲ ಸದಸ್ಯರು ಹಾಗೂ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಬಾಲಚಂದ್ರಪ್ಪ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಡಿಸಿಸಿ ಬ್ಯಾಂಕ್ ಆವರಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಳೂರು ಸೊಸೈಟಿಯ ಅಧ್ಯಕ್ಷರಾದ ದುಮ್ಮ ವಿನಯ್ ಕುಮಾರ್ ರವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕರಾದ ಮಂಜಪ್ಪ ಹಾಗೂ ಬ್ಯಾಂಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೊಸನಗರ ಕೋಟೆಗಾರ್ ವಿದ್ಯಾವರ್ಧಕ ಸಂಘದ ಆವರಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಸಂಘದ ಗೌರವಾಧ್ಯಕ್ಷರಾದ ಬಿ. ಗೋವಿಂದಪ್ಪನವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ನಿರ್ದೆಶಕರ ಸದಸ್ಯರು ಮಹಿಳಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಹೊಸನಗರದ ಗ್ರಂಥಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಂಥಾಲಯದ ಸಿಬ್ಬಂದಿಗಳಾದ ಸುಪ್ರೀಯ ಹಾಗೂ ರೂಪರವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಓದುಗರರು ಉಪಸ್ಥಿತರಿದ್ದರು.
ಸಾರ್ವಜನಿಕ ಆಸ್ಪತ್ರೆಯಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ಶಾಂತರಾಜ್ ಧ್ವಜಾರೋಹಣ ನಡೆಸಿ ಏಕತೆ ಐಕ್ಯತೆಯ ಬಗ್ಗೆ ಸಂದೇಶ ನೀಡಿದರು.
ಚೌಡಮ್ಮ ರಸ್ತೆಯಲ್ಲಿ ಚೌಡಮ್ಮ ಆಟೋ ನಿಲ್ದಾಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಸಿದ ಆಟೋ ಚಾಲಕರು ಆಟೋ ಚಾಲಕ ಹಾಗೂ ಶ್ರಮಜೀವಿಯಾದ ಪಿಗ್ಮಿ ಪಾಂಡುರವರನ್ನು ಸನ್ಮಾನಿಸಿ ಗೌರವಿಸಿದರು.
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago