ಹೊಸನಗರ ; ಮಕ್ಕಳಿಗೆ ಜಂತುಹುಳು ಮಾತ್ರೆ ವಿತರಣೆ

0 3


ಹೊಸನಗರ: ತಾಲ್ಲೂಕಿನ ಪಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ರಾಷ್ಟ್ರೀಯ ಜಂತುಹುಳು ನಿವಾರಣೆಯಡಿಯಲ್ಲಿ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಶಾಲೆ ಪ್ರೌಢ ಶಾಲಾ ಮಕ್ಕಳಿಗೆ ಜಂತುಹುಳು ಮಾತ್ರೆಗಳನ್ನು ವಿತರಿಸಲಾಯಿತು.

ಈ ಜಂತು ಹುಳು ಮಾತ್ರೆಯನ್ನು 1 ವರ್ಷದಿಂದ 19 ವರ್ಷದವರೆಗಿನ ಎಲ್ಲ ಮಕ್ಕಳಿಗೂ ವಿತರಿಸಲಾಗಿದ್ದು ಪ್ರತಿಯೊಬ್ಬರು ಜಂತುಹುಳು ಮಾತ್ರೆಗಳನ್ನು ಸೇವಿಸಬೇಕೆಂದು ಕ್ಷೇತ್ರ ಆರೋಗ್ಯ ನಿರೀಕ್ಷಣಾಧಿಕಾರಿ ರಮೇಶ್ ಆಚಾರ್‌ರವರು ತಿಳಿಸಿದರು.


ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ, ಆಶಾ ಕಾರ್ಯಕರ್ತೆ ಸವಿತಾ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ವಿನಾಯಕ ನವುಡ ಗೌತಮ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!