Hosanagara | ಆಶಾ ಕಾರ್ಯಕರ್ತೆಯರ ಜ್ವಲಂತ ಸಮಸ್ಯೆಗಳನ್ನು ತುರ್ತಾಗಿ ಪರಿಗಣಿಸುವಂತೆ ಆಗ್ರಹಿಸಿ ಮನವಿ

ಹೊಸನಗರ : ಸರ್ಕಾರದ ಎಲ್ಲಾ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಮ್ಮ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುತಿಲ್ಲದ ಕಾರಣ ಆಶಾ ಕಾರ್ಯಕರ್ತೆಯರ ಜೀವನಮಟ್ಟ ಅದೋಗತಿಗೆ ಇಳಿದಿದ್ದು ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ತತ್ತಕ್ಷಣ ಸ್ಪಂದಿಸಬೇಕೆಂದು ಹೊಸನಗರ ತಾಲೂಕು ಆಶಾ ಕಾರ್ಯಕರ್ತೆಯರ ಸಂಘ ಆಗ್ರಹಪಡಿಸಿದೆ.

ಆಶಾ ಕಾರ್ಯಕರ್ತೆಯರು ಇಂದು ತಹಸಿಲ್ದಾರ್ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಈ ದಿನಗಳಲ್ಲಿ ನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಪ್ರತಿದಿನ ಗಗನಕೇರುತ್ತಿದೆ. ಸರ್ಕಾರ ನೀಡುತ್ತಿರುವ ವೇತನ ಜೀವನೋಪಾಯಕ್ಕೆ ಸಾಲುತ್ತಿಲ್ಲ. ಈ ಸಮಸ್ಯೆಗಳು ದೀರ್ಘಕಾಲಿನದಾಗಿದ್ದು ಇದರಿಂದ ಆಶಾ ಕಾರ್ಯಕರ್ತೆಯರ ಕುಟುಂಬ ನಿರ್ವಹಣೆ ಹೈರಾಣಗಿದೆ.

ಆಶಾ ಕಾರ್ಯಕರ್ತೆಯರ ಸಮಸ್ಯೆ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದರೆ ಸಾಮೂಹಿಕವಾಗಿ ವಜಾಗೊಳಿಸುವ ಬೆದರಿಕೆ ಒಡ್ಡುತ್ತಿದ್ದಾರೆ ಕೋರಿ ಇನ್ಸೆಂಟಿವ್ವನ್ನು ಪಾಯಿಂಟ್ ಗಳಿಂದ ಮುಕ್ತಗೊಳಿಸಬೇಕು ಮತ್ತು ಮೊತ್ತವನ್ನು 11 ಸಾವಿರಕ್ಕೆ ನಿಗದಿಪಡಿಸಿರಿ ಇಲ್ಲದಿದ್ದರೆ ದೆಹಲಿ ಸರ್ಕಾರ ಘೋಷಿಸಿದ ಕುಶಲ ಕರ್ಮಿಗಳಿಗೆ ನಿಗದಿಪಡಿಸಿದ ಕನಿಷ್ಠ ವೇತನದ ಪ್ರಕಾರ ಮಾಸಿಕ ವೇತನವನ್ನು ನಿಗದಿಪಡಿಸಬೇಕು.

ಆಶಾ ಕಾರ್ಯಕರ್ತೆರಿಗೆ ರಜೆ, ಭವಿಷ್ಯನಿಧಿ, ವಿದ್ಯಾರ್ಥಿ ವೇತನ, ಪಿಂಚಣಿ, ಆರೋಗ್ಯ ಸೌಲಭ್ಯ ಜೀವವಿಮೆ ಹಾಗೂ ಹೆರಿಗೆ ಪ್ರಯೋಜನಗಳಂತ ಎಲ್ಲಾ ರೀತಿಯ ಸಾಮಾಜಿಕ ಭದ್ರತಾ ಪ್ರಯೋಜನಗಳನ್ನು ಒದಗಿಸಬೇಕು. ಕೆಲಸದಿಂದ ನಿವೃತ್ತಿರಾಗುವ ವೇಳೆ ಕನಿಷ್ಠ 5 ಲಕ್ಷ ಮೊತ್ತ ನೀಡಬೇಕು.

ಪ್ರೋತ್ಸಾಹ ಧನವನ್ನು ನಿಗದಿಪಡಿಸದೆ ಯಾವುದೇ ಕೆಲಸವನ್ನು ನೀಡಬಾರದು ಹಾಗೂ ಯಾವುದೇ ಒತ್ತಡವನ್ನು ತರಬಾರದು. ಆ ಕೆಲಸಗಳಿಗೆ ತಾರ್ಕಿಕ ಮತ್ತು ಸೂಕ್ತವಾದ ಪ್ರೋತ್ಸಾಹವನ್ನು ಘೋಷಿಸಬೇಕು. ಆಶಾ ಕಾರ್ಯಕರ್ತೆಯರನ್ನು ಆರೋಗ್ಯ ಕಾರ್ಯಕರ್ತೆಯರಂತೆ ಸಹ ರೋಗಿಗಳ ಆರೈಕೆ ಭತ್ಯೆ ಅಡಿಯಲ್ಲಿ ಒಳಗೊಳ್ಳಬೇಕು. ಹಾಗೂ ಕಾರ್ಯಕರ್ತರುಗಳಿಗೆ ಆರೋಗ್ಯ ಇಲಾಖೆಯ ಗ್ರೂಪ್ ಸಿ ನೌಕರ ಸ್ಥಾನಮಾನ ನೀಡಬೇಕು ಎಂದು ಇನ್ನೂ ಹಲವಾರು ಹಲವಾರು ಬೇಡಿಕೆಗಳ ಸೇರಿದಂತೆ ಮನವಿ ಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲೂಕು ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಪೂರ್ಣಿಮಾ, ಕಾರ್ಯದರ್ಶಿ ನಾಗರತ್ನ, ಪದಾಧಿಕಾರಿಗಳಾದ ಸವಿತಾ, ಸುಮಾ, ಶಾಂತ, ರೇಷ್ಮಾ, ಮೈಮುನಾಬಿ, ರೇಣುಕಾ, ಶೋಭಾ, ಸವಿತಾ, ಜಯಶ್ರೀ, ಪ್ರಾಪ್ತಿ ಪ್ರಸನ್ನ, ಶಾರದಾ ಮೊದಲಾದವರಿದ್ದರು‌.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

12 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

16 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

16 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

19 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

19 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago