Pocso Case | ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯೊಂದಿಗೆ ನಿರಂತರ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿ ಮಾಡಿದ ಯುವಕ ಅಂದರ್ !
ಹೊಸಗರ : ತಾಲೂಕಿನ ನಗರ ಹೋಬಳಿಯ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆಯೊಂದಿಗೆ ನಿರಂತರ ಲೈಂಗಿಕ ಸಂಪರ್ಕ ಬೆಳೆಸಿ ಗರ್ಭಿಣಿ ಮಾಡಿದ ಮಾಡಿದ ಯುವಕನ ವಿರುದ್ಧ ನೊಂದ ಬಾಲಕಿಯ ಪೋಷಕರು ನೀಡಿದ ದೂರಿನನ್ವಯ ಪೋಕ್ಸೋ ಕೇಸ್ ದಾಖಲಾಗಿದೆ.
ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಪೋಷಕರು ಕೂಲಿ ಕೆಲಸ ಮಾಡುವವರಾಗಿದ್ದು, ನಗರದಲ್ಲಿ ವೇಲ್ಡಿಂಗ್ ಕೆಲಸ ಮಾಡುತ್ತಿರುವ ಹಾವೇರಿ ಜಿಲ್ಲೆಯ ಹಾನಗಲ್ ಮೂಲದ ಮಹಮ್ಮದ್ ಮುಜಾಪುರ್ (28) ಎಂಬ ಯುವಕ ಅಪ್ರಾಪ್ತೆ ಬಾಲಕಿಯನ್ನು ಪರಿಚಯ ಮಾಡಿಕೊಂಡು ಪ್ರೀತಿಸಿ ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ನಿರಂತರ ದೈಹಿಕ ಸಂಪರ್ಕ ನಡೆಸುತ್ತಿದ್ದನು.

ನೊಂದ ಬಾಲಕಿ ಈಗ ಗರ್ಭಿಣಿಯಾಗಿದ್ದು ನಂತರ ಆಕೆಯನ್ನು ತನ್ನ ಊರಿಗೆ ಕರೆದೋಯ್ದು ಆಸ್ಪತ್ರೆಯಲ್ಲಿ ಮಗು ತೆಗೆಸಲು ಪ್ರಯತ್ನ ಮಾಡಿದ್ದಾನೆ. ಆದರೆ ಅಲ್ಲಿನ ವೈದ್ಯರಿಗೆ ಆಕೆಯ ಬಗ್ಗೆ ಅನುಮಾನ ಬಂದು ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.
ಬಾಲಕಿಯ ಪೋಷಕರ ದೂರಿನನ್ವಯ ಪೋಕ್ಸೋ ಪ್ರಕರಣ ದಾಖಲಿಸಿದ ನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.