ಹೊಸನಗರ: ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಪತ್ರಕರ್ತರ ಕೊಡುಗೆ ಅನನ್ಯ. ಸಮಾಜದಲ್ಲಿ ಕಾರ್ಯನಿರ್ವಹಿಸುವಾಗ ದಕ್ಕೆ ಮಾಡುವುದು ಸರಿಯಲ್ಲ ಎಂದು ಹಿರಿಯ ಪತ್ರಕರ್ತ ಪಿ.ಎನ್.ನರಸಿಂಹಮೂರ್ತಿ ಹೇಳಿದರು.
ಶಿವಮೊಗ್ಗದಲ್ಲಿ ನಡೆದ ಪ್ರಧಾನಿ ಮೋದಿ ಕಾರ್ಯಕ್ರಮದ ಸಂದರ್ಭದಲ್ಲಿ ಸುದ್ದಿಗಾಗಿ ತೆರಳಿದ್ದ ಹಿರಿಯ ಪತ್ರಕರ್ತ ಆರ್.ಎಸ್.ಹಾಲಸ್ವಾಮಿ ಮೇಲಿನ ದಾವಣಗೆರೆ ಎಸ್ಪಿ ದೌರ್ಜನ್ಯವನ್ನು ಖಂಡಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ಶಾಖೆಯಿಂದ ಮನವಿ ಸಲ್ಲಿಸಲಾಯಿತು.
ಪತ್ರಕರ್ತರು ನಿರ್ಭೀತಿಯಿಂದ ಕಾರ್ಯನಿರ್ವಹಿಸಬೇಕು. ಅದಕ್ಕೆ ಪೂರಕ ವಾತಾವರಣ ನಿರ್ಮಿಸುವುದು ಸರ್ಕಾರದ ಜವಾಬ್ದಾರಿ ಸರ್ಕಾರದ ಜವಾಬ್ದಾರಿ ಎಂದರು.
ಶಿವಮೊಗ್ಗದಲ್ಲಿ ಪತ್ರಕರ್ತರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ತಾಲೂಕು ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಕಂದಾಯ ಅಧಿಕಾರಿ ವಿನಯ ಎಂ ಆರಾಧ್ಯ ಸರ್ಕಾರಕ್ಕೆ ತಲುಪಿಸುವುದಾಗಿ ತಿಳಿಸಿದರು.
ಸಂಘದ ಅಧ್ಯಕ್ಷ ರವಿ ಬಿದನೂರು, ಕಾರ್ಯದರ್ಶಿ ನಾರವಿ ಹೊಸನಗರ, ಎಸ್.ಶಾಂತಾರಾಮ, ಮನು ಸುರೇಶ್, ಅಶ್ವಿನಿ ಪ್ರಭು ಪಾಲ್ಗೊಂಡಿದ್ದರು.