ಹೊಸನಗರ: ತಾಲ್ಲೂಕಿನ ಜೇನಿ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಪಕ್ಷವನ್ನು ಮುಂಚೂಣಿಗೆ ತರಲು ಹಗಲಿರುಳು ಶ್ರಮಿಸಿದ ಹಾಗೂ ಅನೇಕ ವರ್ಷಗಳ ಕಾಲ ಜೇನಿ ಬಿಜೆಪಿ ಬೂತ್ ಕಮಿಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಮಸಗಲ್ಲಿ ಉಮೇಶ್‌ರವರು ತಮ್ಮ ಬೂತ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಅವರು ತಾಲ್ಲೂಕು ಬಿಜೆಪಿ ಅದ್ಯಕ್ಷ ಗಣಪತಿ ಬಿಳಗೋಡುರವರಿಗೆ ಹಾಗೂ ಜಿಲ್ಲಾ ಬಿಜೆಪಿ ಕಾರ್ಯಾಲಯಕ್ಕೆ ರಾಜೀನಾಮೆ ಪತ್ರವನ್ನು ನೀಡಿದ್ದು ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ.
ನಾನು ಜೇನಿ ಗ್ರಾಮದಲ್ಲಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿರುವ ತೃಪ್ತಿ ನನಗಿದೆ. ಆದರೆ ಶಾಸಕರ ವರ್ತನೆಯಿಂದ ಬೇಸೆತ್ತು ರಾಜೀನಾಮೆ ನೀಡಬೇಕಾಗಿದೆ ಎಂದು ಹೇಳಿದ್ದು ನನ್ನ ಪತ್ನಿಯಾದ ಗುಲಾಬಿ ಉಮೇಶ್‌ರವರು ಜೇನಿ ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿ ಈ ಭಾಗದ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ನನಗೆ ಬಡವರ ಸೇವೆ ಮಾಡಲು ಸಾಧ್ಯವಾಗದೇ ಇರುವುದರಿಂದ ಈ ರಾಜೀನಾಮೆ ನೀಡುತ್ತಿದ್ದೇನೆ ಎಂದರು.