ಹೊಸನಗರ : ವಿದೇಶಿ ಅಡಿಕೆಗೆ ಕಡಿವಾಣ ಹಾಕುವಲ್ಲಿ ಸರ್ಕಾರದ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಹೊಸನಗರದಲ್ಲಿಂದು ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ಈ ಹಿಂದಿನ ಒಪ್ಪಂದದ ಪ್ರಕಾರ ವಿದೇಶಿ ಅಡಿಕೆ ದೇಶಕ್ಕೆ ಬರುತ್ತಿದೆ. ಅಲ್ಲಿನ ಕಳಪೆ ಅಡಿಕೆ ಇಲ್ಲಿನ ಮಾರುಕಟ್ಟೆಯಲ್ಲಿ ಹೋಗುವುದಿಲ್ಲ. ವಿದೇಶಿ ಅಡಿಕೆಗೆ ಕಡಿವಾಣ ಹಾಕುವಲ್ಲಿ ಸರ್ಕಾರ ಚಿಂತನೆ ನಡೆಸಿದೆ. ಇದರಿಂದ ನಮ್ಮ ಅಡಿಕೆಗೆ ಉತ್ತಮ ಮಾರುಕಟ್ಟೆ ಲಭ್ಯವಾಗಲಿದೆ ಎಂದ ಸಚಿವರು ಬಜೆಟ್‌ನಲ್ಲೂ ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಹಣ ಬಿಡುಗಡೆ ಮಾಡಲು ಯೋಜನೆ ರೂಪಿಸಿದೆ ಎಂದರು.
ಬಜೆಟ್ ಜನತೆಗೆ ಖುಷಿ ಕೊಟ್ಟಿದೆ:
ಮುಖ್ಯಮಂತ್ರಿ ಬೊಮ್ಮಾಯಿ ಮಂಡಿಸಿದ 3.09 ಲಕ್ಷ ಕೋಟಿ ರೂ. ಬಜೆಟ್‌ನ್ನು ರಾಜ್ಯದ ಜನರು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಬಜೆಟ್ ರೈತರಿಗೆ ಖುಷಿ ಕೊಟ್ಟಿದೆ. ರಾಜ್ಯದ ಎಲ್ಲಾ ಜನರ ಹಿತಕಾಯಲಾಗಿದೆ. ಇದೊಂದು ಸರ್ವವ್ಯಾಪಿ, ಸರ್ವಸುಖಿ ಬಜೆಟ್ ಆಗಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು.