ಹೊಸನಗರ: ಪಟ್ಟಣದ ಖಾಸಗಿ ಹೋಲಿ ರೆಡೀಮರ್ ಸಂಯುಕ್ತ ಪದವಿ ಪೂರ್ವ ಕಾಲೇಜು ಪಿಯುಸಿ ಪರೀಕ್ಷೆಯಲ್ಲಿ ಶೇ. 98 ಫಲಿತಾಂಶ ಪಡೆದಿದೆ ಎಂದು ಹೋಲಿ ರಿಡೀಮರ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿಸ್ಟರ್ ಐರಿನ್ ಡಿಸಿಲ್ವಾರವರು ಹೇಳಿದ್ದಾರೆ.
ಅವರು ಕಾಲೇಜಿನ ಆವರಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗ, ವಿಜ್ಞಾನ ವಿಭಾಗ ಹಾಗೂ ವಾಣಿಜ್ಯ ವಿಭಾಗಗಳಿದ್ದು ಒಟ್ಟು ಮೂರು ವಿಭಾಗದಲ್ಲಿ 39 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದು ಅದರಲ್ಲಿ 38 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಅತ್ಯುನ್ನತ್ತ ಶ್ರೇಣಿಯಲ್ಲಿ ಉತ್ತೀರ್ಣರಾದವರು 14 ವಿದ್ಯಾರ್ಥಿಗಳು ಮತ್ತು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದವರು 21 ಜನ ವಿದ್ಯಾರ್ಥಿಗಳು ಹಾಗೂ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾದವರು 3 ವಿದ್ಯಾರ್ಥಿಗಳಾಗಿದ್ದಾರೆ.
ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಶೇಕಡವಾರು ಫಲಿತಾಂಶ 100% ಬಂದಿದ್ದು ಕಲಾ ವಿಭಾಗದಲ್ಲಿ 99% ಬಂದಿರುತ್ತದೆ,
ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿ ಹನೀಫ್ ಯು ಅಂಕ 589 (ಶೇ.98.18) ಹಾಗೂ ಅರ್ಥಶಾಸ್ತ್ರ ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ಮತ್ತು ಗಣಕ ವಿಜ್ಞಾನದಲ್ಲಿ 100 ಕ್ಕೆ 100 ಅಂಕ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತಬಸ್ಸುಮ್ ಅಂಕ 556 (ಶೇ.93) ಫಲಿತಾಂಶ ಪಡೆದಿದ್ದಾರೆ
ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಸ್ನೇಹಿತ್ ಎಂ ಅಂಕ 552 (ಶೇ.92.16) ಅಂಕ ಪಡೆದಿದ್ದಾರೆ ಎಂದು ತಿಳಿಸಿದರು.
ಅಭಿನಂದನೆ:
ಕಾಲೇಜಿಗೆ ಉತ್ತಮ ಫಲಿತಾಂಶ ತಂದು ಕೊಡಲು ಕಾರಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಶಾಲಾ ಸಂಚಾಲಕರು ಮತ್ತು ಎಲ್ಲ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳಿಗೆ ಈ ಮೂಲಕ ಅಭಿನಂದಿಸಿದ್ದಾರೆ.