ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ಮೂರು ಪಲ್ಟಿಯಾದ ಕಾರು
ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿರುವ ಗುಡ್ ಶಫರ್ಡ್ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ನಡೆದಿದೆ.

ರಿಪ್ಪನ್‌ಪೇಟೆ ಕಡೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಮಾರುತಿ ಜೆನ್ ಕಾರು ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಮರದ ದಿಬ್ಬಗಳಿಗೆ ಡಿಕ್ಕಿಯಾಗಿ ನಂತರ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ಮೂರು ಪಲ್ಟಿಯಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು ಎನ್ನಲಾಗುತ್ತಿದೆ.
ಪಟ್ಟಣದಲ್ಲಿ ಜೆಸಿಬಿ ಚಾಲಕನಾಗಿರುವ ಹಾಸನ ಮೂಲದ ವ್ಯಕ್ತಿ ಕಾರು ಚಲಾಯಿಸುತಿದ್ದರು ಎನ್ನಲಾಗುತಿದ್ದು, ಅವರಿಗೆ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.