ನಾಳೆ ತಮ್ಮಡಿಕೊಪ್ಪದಲ್ಲಿ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ದೇವರ ಜಾತ್ರಾ ಮಹೋತ್ಸವ

0 0

ರಿಪ್ಪನ್‌ಪೇಟೆ : ತಮ್ಮಡಿಕೊಪ್ಪ ಗ್ರಾಮದಲ್ಲಿರುವ ಶ್ರೀ ಗುರು ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಸ್ವಾಮಿ ಹಾಗೂ ಶ್ರೀ ನಾಗದೇವತೆಗಳ ಐದನೇ ವರ್ಷದ ಜಾತ್ರಾ ಮಹೋತ್ಸವ ಭಾನುವಾರದಂದು ಜರಗಲಿದೆ.

ಬೆಳಗ್ಗೆ ಗಣಪತಿ ಪೂಜೆ, ಪುಣ್ಯ ವಾಚನ, ಹೋಮ, ಕಲಾ ಹೋಮ, ಇನ್ನು ಮುಂತಾದ ಧಾರ್ಮಿಕ ಕಾರ್ಯಗಳು ಜರಗಲಿವೆ. ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕರಿಗೆ ಹಾಗೂ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ.


ಸಂಜೆಯ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕೋಣಂದೂರಿನ ಮಳಲಿ ಮಠದ ಡಾ|| ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿಗಳು, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ಹಾಲಪ್ಪ, ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಕೆ ರಾವ್, ಬಾಳೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷ ದಿವಾಕರ್, ಗ್ರಾ.ಪಂ ಸದಸ್ಯ ಸುಂದರೇಶ್ ಇನ್ನು ಮುಂತಾದ ಗಣ್ಯರು ಭಾಗವಹಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾಧಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನ ಸಮಿತಿಯವರು ಈ ಮೂಲಕ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!