ರಿಪ್ಪನ್‌ಪೇಟೆ: ಕೇಂದ್ರ ಸರ್ಕಾರ ಈಗಾಗಲೇ ಪಿಎಫ್‌ಐ ಅನ್ನು ನಿಷೇಧಿಸಲಾಗಿದ್ದು ಅದನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದವರು ಬಜರಂಗದಳ ಮತ್ತು ಪಿಎಫ್‌ಐ ಸಂಘಟನೆಯನ್ನು ನಿಷೇಧ ಮಾಡುವುದಾಗಿ ಚುನಾವಣೆ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವ ಕ್ರಮದಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸರ್ವ ನಾಶವಾಗುವುದೆಂದು ರಾಜ್ಯ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ರಾಜ್ಯಗೃಹ ಸಚಿವ ಆರಗ ಜ್ಞಾನೇಂದ್ರ ಪರ ಬಹಿರಂಗ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಅವರು ಕೋಡೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪಿಎಫ್‌ಐ ಸಂಘಟನೆ ರಾಷ್ಟ್ರ ವಿರೋಧಿ ಚಟುವಟಿಕೆ ಗೋಹತ್ಯೆ ಮತ್ತು ಮತಾಂತರ ಹಾಗೂ ಭಯೋತ್ಪಾದನೆಗೆ ಪ್ರಚೋಧನೆ ನೀಡುವಂತಹ ಸಂಘಟನೆಯಾಗಿದೆ ಎಂದು ಅದನ್ನು ನಿಷೇಧಿಸಲಾಗಿದ್ದು ಈಗ ಕಾಂಗ್ರೆಸ್ ಪಕ್ಷ ಪಿಎಫ್‌ಐ ಮತ್ತು ಬಜರಂಗದಳ ನಿಷೇಧಿಸುವ ಬಗ್ಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದು ಅದನ್ನು ನಿಷೇಧಕ್ಕೆ ಮುಂದಾದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸರ್ವನಾಶವಾಗುವುದೆಂದು ಹೇಳಿದರು.
ಹಿಂದುತ್ವದ ಪ್ರತಿಪಾದಕರಾಗಿ ಕೆಲಸ ಮಾಡುತ್ತಿರುವ ಬಜರಂಗದಳವನ್ನು ಕಾಂಗ್ರೆಸ್ ಪಕ್ಷದವರು ಪ್ರಣಾಳಿಕೆಯಲ್ಲಿ ಹೇಳಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ. ಸ್ವಾಮಿರಾವ್, ಬಿಜೆಪಿ ಮುಖಂಡರಾದ ಎನ್.ಆರ್.ದೇವಾನಂದ, ನಾಗೇಂದ್ರ ಕಲ್ಲೂರು, ಜಯಪ್ರಕಾಶ್‌ಶೆಟ್ಟಿ, ಸುಧೀರ್, ಇನ್ನಿತರರು ಹಾಜರಿದ್ದರು.