ಬೈಕ್ ಡಿಕ್ಕಿ ಪಾದಚಾರಿ ಸಾವು !
ರಿಪ್ಪನ್‌ಪೇಟೆ : ಹುಂಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಲ್ಲೇಶ್ವರ ಗ್ರಾಮದಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬನಿಗೆ ಬುಧವಾರ ರಾತ್ರಿ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತ ವ್ಯಕ್ತಿ ಸತೀಶ್ ಎನ್ನಲಾಗಿದೆ. ಈ ಘಟನೆ ಸಂಬಂಧ ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.