ರಿಪ್ಪನ್‌ಪೇಟೆ: ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿ ಸೇರಿದಂತೆ ಜಾನಪದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಪುರುಷರಿಗೆ ಮಾತ್ರ ಸೀಮಿತವಾಗದೆ ಮಹಿಳೆಯರಿಗೂ ಇಂತಹ ಕ್ರೀಡಾಕೂಟ ಮತ್ತು ಸಾಂಸ್ಕೃತಿ ಸ್ಪರ್ಧೆಗಳನ್ನು ಮುಂದಿನ ದಿನಗಳಲ್ಲಿ ಆಯೋಜಿಸಿ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕರೆ ನೀಡಿದರು.
ರಿಪ್ಪನ್‌ಪೇಟೆಯಲ್ಲಿ ಸಿದ್ದಿವಿನಾಯಕ ವಾಲಿಬಾಲ್ ಕ್ಲಬ್ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ 10ನೇ ವರ್ಷದ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಹಿರಿಯ ವಾಲಿಬಾಲ್ ಅಟಗಾರ ಪ್ರಭಾಕರ ಬಲ್ಲಾಳ ಕಾರ್ಯಕ್ರಮ ಉದ್ಘಾಟಿಸಿದರು.
ಸಿದ್ದಿವಿನಾಯಕ ಬಾಲಿಬಾಲ್ ಕ್ಲಬ್ ಅಧ್ಯಕ್ಷ ಪಿ.ಸುಧೀರ್ ಅಧ್ಯಕ್ಷತೆ ವಹಿಸಿದ್ದರು.
ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ ಮಾತನಾಡಿ, ಮುಂಬರುವ ವರ್ಷದಲ್ಲಿ ರಿಪ್ಪನ್‌ಪೇಟೆಯಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಗೆ ಸುಸಜ್ಜಿತ ಕ್ರೀಡಾಂಗಣವನ್ನು ನಿರ್ಮಿಸುವುದರ ಬಗ್ಗೆ ಸಂಸದ ಮತ್ತು ಶಾಸಕರೊಂದಿಗೆ ಚರ್ಚಿಸಿ ಅನುದಾನ ಕೊಡಿಸುವುದಾಗಿ ಹೇಳಿದರು.
ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಹುಂಚ ಗ್ರಾ.ಪಂ.ಸದಸ್ಯ ವಿಎಸ್ ಎಸ್.ಎನ್,ಬಿ. ನಿರ್ದೇಶಕಿ ಯಶಸ್ವತಿ ವೃಷಭರಾಜ್ ಜೈನ್, ಗ್ರಾ.ಪಂ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಉಪಾಧ್ಯಕ್ಷೆ ಮಹಾಲಕ್ಷ್ಮಿ, ಸಾಗರದ ಯುವಮುಖಂಡ ಪ್ರಶಾಂತ, ಎನ್.ಸತೀಶ್, ಶಶಿಕುಮಾರ್ ಇನ್ನಿತರರು ಮುಖ್ಯಅತಿಥಿಗಳಾಗಿ ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ರಾಜ್ಯ ಮತ್ತು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆಗೈದ ಕ್ರೀಡಾಪಟುಗಳನ್ನು ಸಮಾರಂಭದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಬೆಂಗಳೂರನ ಶಾಹಿ ಫ್ರೆಂಡ್ಸ್ ಪ್ರಥಮ ಸ್ಥಾನ ಮತ್ತು ಹಾಸನದ ಎ.ಆರ್.ಪ್ರೋಟ್ಸ್ ದ್ವಿತೀಯ ಸ್ಥಾನ ಮಲೆನಾಡು ಪ್ರೋಟ್ಸ್ ಮಂಗಳೂರು ರ‍್ಪಾಪುರಂ ತೃತೀಯ ಮತ್ತು ನಾಲ್ಕನೇ ಸ್ಥಾನ ಗಳಿಸುವುದರೊಂದಿಗೆ ನಗದು ಬಹುಮಾನ ಮತ್ತು ಪಾರಿತೋಷಕವನ್ನು ಪಡೆದುಕೊಂಡರು.