ರಿಪ್ಪನ್‌ಪೇಟೆ: ಮಣಿಪುರದಲ್ಲಿ ಅಸ್ಸಾಂ ನಲ್ಲಿ ಭಾರತೀಯ ಸೇನೆಯಲ್ಲಿ ರೈಫಲ್ಸ್ ವಿಭಾಗದಲ್ಲಿ ಸೋಮವಾರ ಬೆಳಗಿನ ಜಾವ 4.27 ವೇಳೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಪಟ್ಟಣದ ಶಬರೀಶನಗರದ ನಿವಾಸಿ ಸಂದೀಪ್ (27) ಆಕಸ್ಮಿಕ ಗುಂಡೇಟಿನಿಂದ ಮೃತಪಟ್ಟಿದ್ದು ಮೃತದೇಹ ಮಂಗಳವಾರ ರಾತ್ರಿ 8ಕ್ಕೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು ಬುಧವಾರ ಬೆಳಗಿನ ಜಾವ 3 ಗಂಟೆಗೆ ರಿಪ್ಪನ್‌ಪೇಟೆಗೆ ಆಗಮಿಸಲಿದೆ.
ಪಾರ್ಥಿವ ಶರೀರದ ಧಾರ್ಮಿಕ ವಿಧಿ ವಿಧಾನಗಳ ನಂತರ ಬೆಳಿಗ್ಗೆ 10ಕ್ಕೆ ಶಬರೀಶ ನಗರದಿಂದ ಪಟ್ಟಣದ ವಿನಾಯಕ ವೃತ್ತದ ವರೆಗೆ ಮೆರವಣಿಗೆಯಲ್ಲಿ ಕೊಂಡೊಯ್ದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು, ತದನಂತರ ಗಾಂಧಿನಗರದ ಹಿಂದೂ ರುದ್ರಭೂಮಿಯಲ್ಲಿ ಯೋಧನ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.