ರಿಪ್ಪನ್‌ಪೇಟೆಯಲ್ಲಿ ಅದ್ದೂರಿಯಾಗಿ ಜರುಗಿದ ಛತ್ರಪತಿ ಶಿವಾಜಿ ಜಯಂತ್ಯೋತ್ಸವ

ರಿಪ್ಪನ್‌ಪೇಟೆ: ಛತ್ರಪತಿ ಶಿವಾಜಿ ಮಹಾರಾಜರ 393ನೇ ಜಯಂತ್ಯೋತ್ಸವ ಕಾರ್ಯಕ್ರಮವು ಸಂಭ್ರಮ ಸಡಗರದೊಂದಿಗೆ ರಿಪ್ಪನ್‌ಪೇಟೆಯಲ್ಲಿ ಜರುಗಿತು.
ಛತ್ರಪತಿ ಶಿವಾಜಿ ಪ್ರತಿಮೆಯ ಮೆರವಣಿಗೆ ಹಾಗೂ ಯುವಕರ ಬೈಕ್ ರ‍್ಯಾಲಿಯೊಂದಿಗೆ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಗಮನ ಸೆಳೆಯಿತು.
ಛತ್ರಪತಿ ಶಿವಾಜಿ ಪ್ರತಿಮೆಗೆ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಪುಷ್ಪ ಹಾಕುವುದರೊಂದಿಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಶಿವಾಜಿಯಲ್ಲಿನ ರಾಷ್ಟ್ರ ಪ್ರೇಮ ದೇಶ ಭಕ್ತಿ ಇಂದಿನ ಯುವ ಜನಾಂಗಕ್ಕೆ ಮಾರ್ಗದರ್ಶಿಯಾಗಬೇಕು ಹಾಗೂ ಮರಾಠ ಜನಾಂಗಕ್ಕೆ ಸೀಮಿತವಾಗದೇ ಸರ್ವ ಜನಾಂಗದವರು ಈ ಜಯಂತ್ಯೋತ್ಸವವನ್ನು ಆಚರಿಸುವಂತಾಗಬೇಕು ಎಂದರು.


ಶಿವಾಜಿ ಮರಾಠ ಸಂಘದ ಅಧ್ಯಕ್ಷ ವೈ.ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.
ಗೋಸಾಯಿ ಮಹಾಸಂಸ್ಥಾನ ಮಠದ ಜಗದ್ಗುರು ವೇದಾಂತಾಚಾರ್ಯ ಶ್ರೀ ಮಂಜುನಾಥ ಸ್ವಾಮೀಜಿ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಮಜಿ ಸಚಿವ ಕಾಗೋಡು ತಿಮ್ಮಪ್ಪ, ಗ್ರಾ.ಪಂ.ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಡಾ.ರಾಜಾನಂದಿನಿ, ಸಮಾಜದ ಮುಖಂಡರಾದ ತುಳೋಜಿರಾವ್, ಎಲ್.ದೇವರಾಜ, ರಾಮಚಂದ್ರ, ದೇವರಾಜ್‌ಕುಷನ್, ಸುಂದರೇಶ್, ಎನ್.ಚಂದ್ರೇಶ್, ದಿವಾಕರ, ಕೃಷ್ಣ ಚಂದಳ್ಳಿ, ಶ್ರೀಮಂತ, ಹೆಚ್.ಎಸ್.ಶಿವಕುಮಾರ್ ಇನ್ನಿತರರು ಮುಖ್ಯಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು‌.


ಪ್ರಖರ ವಾಗ್ಮಿ ಆದರ್ಶ ಗೋಖಲೆ ಶಿವಾಜಿ ಜೀವನ ಚರಿತ್ರೆಯ ಕುರಿತು ಉಪನ್ಯಾಸ ನೀಡಿದರು.


ಆಹ್ವಾನಿತ ತಂಡಗಳ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾವಳಿ :
ರಿಪ್ಪನ್‌ಪೇಟೆ: ಇಲ್ಲಿನ ಶ್ರೀ ಸಿದ್ದಿವಿನಾಯಕ ವಾಲಿಬಾಲ್ ಕ್ಲಬ್ ನವರ 10ನೇ ವರ್ಷದ ರಾಜ್ಯಮಟ್ಟದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಮಾ. 11 ರಂದು ಶನಿವಾರ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಿದ್ದಿವಿನಾಯಕ ವಾಲಿಬಾಲ್ ಕ್ಲಬ್ ಅಧ್ಯಕ್ಷ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಥಮ ಬಹುಮಾನ 50 ಸಾವಿರ ರೂ., ದ್ವಿತೀಯ ಬಹುಮಾನ 30 ಸಾವಿರ ರೂ., ತೃತೀಯ ಸ್ಥಾನ 20 ಸಾವಿರ ರೂ., ಚತುರ್ಥ ಬಹುಮಾನ 10 ಸಾವಿರ ರೂ. ಪಾರಿತೋಷಕ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಪಿ.ಸುಧೀರ್ 9448721661 ಮತ್ತು 9538546004 ಹಾಗೂ ರಾಮು 9886442359, ರವಿ 9986137709 ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,745FollowersFollow
0SubscribersSubscribe
- Advertisement -spot_img

Latest Articles

error: Content is protected !!