ರಿಪ್ಪನ್‌ಪೇಟೆ: ಹುಂಚ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆನೆಗದ್ದೆ ಗ್ರಾಮದ ಆನೆಗದ್ದೆ ಗುಡ್ಡದಲ್ಲಿ ಕೋಳಿ ಅಂಕ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿಯನ್ನಾಧರಿ ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಿದಾಗ ಆರೋಪಿಗಳು ಬೈಕ್ ಮತ್ತು ಕೋಳಿ ಬಿಟ್ಟು ಪರಾರಿಯಾದ ಘಟನೆ ನಡೆದಿದೆ.
ಕಾನೂನು ಬಾಹಿರವಾಗಿ ಹಣವನ್ನು ಪಣವಾಗಿಟ್ಟು ಜೂಜಾಟ ರೀತಿಯಲ್ಲಿ ಕೋಳಿ ಅಂಕ ನಡೆಸುತ್ತಿರುವ ಕುರಿತು ಖಚಿತ ಮಾಹಿತಿನ್ನಾಧರಿಸಿ ಪೊಲೀಸರು ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಜೂಜಾಟದಲ್ಲಿ ತೊಡಗಿದ್ದ ಆರೋಪಿಗಳು ಪರಾರಿಯಾಗಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿದ್ದು ಬೈಕ್ ಮತ್ತು ಕೋಳಿಗಳೊಂದಿಗೆ ಓರ್ವ ಆರೋಪಿ ರವಿಚಂದ್ರ ಎಂಬುವನನ್ನು ಬಂಧಿಸಿದ್ದು ಉಳಿದ 11 ಜನ ಆರೋಪಿಗಳು ಪರಾರಿಯಾಗಿದ್ದಾರೆಂದು ಪಿ.ಎಸ್.ಐ ಶಿವಾನಂದ ಕೋಳಿ ತಿಳಿಸಿದರು.
ಈ ಪತ್ತೆ ಕಾರ್ಯಚರಣೆಯಲ್ಲಿ ಪೊಲೀಸ್ ಪೇದೆಗಳಾದ ಉಮೇಶ್ ಮತ್ತು ಶಿವಕುಮಾರ್ ಇನ್ನಿತರರು ಇದ್ದರು.