ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಹಿಂಭಾಗ ಅಗ್ನಿ ಅವಘಡ ; ತಪ್ಪಿದ ಭಾರಿ ಅನಾಹುತ !
ರಿಪ್ಪನ್‌ಪೇಟೆ: ಪಟ್ಟಣದ ಹೊಸನಗರ ರಸ್ತೆಯ ರಾಜಾ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿನ ರಬ್ಬರ್ ತೋಟದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಆದರೆ, ಸ್ಥಳೀಯರು ಹಾಗೂ ಜನಪ್ರತಿನಿಧಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.

ಬೆಂಕಿ ಹೊತ್ತಿಕೊಂಡ ಮಾಹಿತಿ ಸಿಕ್ಕಿದ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ತಿಳಿಸಿದರು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿ ಅವಘಡ ಸಂಭವಿಸಿದ ಸ್ಥಳದ ಕೂದಲೆಳೆ ಅಂತರದಲ್ಲಿ ಮರದ ಸಾಮಿಲ್ ಹಾಗೂ ಪೆಟ್ರೋಲ್ ಬಂಕ್ ಇತ್ತು. ಸ್ಥಳೀಯರ ಪ್ರಜ್ಞೆಯಿಂದ ಆಗಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.
ಘಟನೆಯ ಹಿನ್ನೆಲೆ :
ನೆಹರು ಬಡಾವಣೆಯ ಖಾಸಗಿ ವ್ಯಕ್ತಿಯೊಬ್ಬರ ರಬ್ಬರ್ ತೋಟದಲ್ಲಿ ಪ್ರಥಮವಾಗಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲಿ ತನ್ನ ಕೆನ್ನಾಲಿಗೆಯನ್ನು ಎರಡು ಹೆಕ್ಟೇರ್ ಪ್ರದೇಶಕ್ಕೆ ಆವರಿಸಿಕೊಂಡಿತ್ತು. ಇದನ್ನು ಗಮನಿಸಿದ ನೆಹರು ಬಡಾವಣೆಯ ಸ್ಥಳೀಯರು ಹಾಗೂ ಗ್ರಾಪಂ ಸದಸ್ಯ ಆಸೀಫ್ ಕೂಡಲೇ ಎಚ್ಚೆತ್ತುಕೊಂಡು ಬೆಂಕಿ ನಂದಿಸಲು ಯತ್ನಿಸುವುದರೊಂದಿಗೆ ಅಗ್ನಿಶಾಮಕ ದಳಕ್ಕೆ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕೆಲವೇ ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Waiting for you climb in to bed with me… https://is.gd/dBsd60