ರಿಪ್ಪನ್‌ಪೇಟೆ ; ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಶವ ಪತ್ತೆ
ರಿಪ್ಪನ್‌ಪೇಟೆ : ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.

ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣದಲ್ಲಿ ಸುಮಾರು 60 ವರ್ಷದ ಪಟ್ಟಣದಲ್ಲಿ ಛತ್ರಿ ರಿಪೇರಿ ಮಾಡಿಕೊಂಡಿದ್ದ ವ್ಯಕ್ತಿ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ.
ಸ್ಥಳಕ್ಕೆ ಪಿಎಸ್ಐ ಎಸ್.ಪಿ ಪ್ರವೀಣ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ.
ಮೃತನನ್ನು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರೆಹೊಂಡದ ಗಂಗಪ್ಪ ಎನ್ನಲಾಗುತ್ತಿದೆ.