ರಿಪ್ಪನ್‌ಪೇಟೆ ; ಬಾರ್ ಹಿಂಭಾಗದಲ್ಲಿ ವ್ಯಕ್ತಿಯ ಶವ ಪತ್ತೆ !
ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ನ್ಯೂ ಚಾಣಕ್ಯ ಬಾರ್ ಹಿಂಭಾಗದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ತೀರ್ಥಹಳ್ಳಿ ರಸ್ತೆಯ ನಿವಾಸಿ ಓಂಕೇಶ್ (52) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ನ್ಯೂ ಚಾಣಕ್ಯ ಬಾರ್ ಹಿಂಭಾಗದಲ್ಲಿ ಮದ್ಯ ವ್ಯಸನಿಯಾಗಿದ್ದ ಓಂಕೇಶ್ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಪಿಎಸ್ಐ ಎಸ್.ಪಿ ಪ್ರವೀಣ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬಾರ್ ಮಾಲೀಕರು ಸರ್ಕಾರದ ನಿಯಮಗಳನ್ನು ಸರಿಯಾಗಿ ಪಾಲಿಸದೇ ಬಾರ್ ಹಿಂಭಾಗದಲ್ಲಿ ಮದ್ಯ ಸೇವನೆಗೆ ಅನುವು ಮಾಡಿಕೊಟ್ಟಿದ್ದು ಕೆಲವೊಂದು ಕಿಂಡಿಗಳನ್ನು ಸೃಷ್ಟಿಸಿದ್ದಾರೆ. ಈ ಕಿಂಡಿಗಳು ಮುಂಜಾನೆಯ ಕುಡುಕರಿಗೆ ಸ್ವರ್ಗದ ಬಾಗಿಲಂತೆ ಕಂಡು ಬರುತ್ತಿದೆ. ಈ ಕುಡುಕರಿಂದ ಹಿಂಭಾಗದಲ್ಲಿರುವ ಸ್ಥಳೀಯರಿಗೆ ದಿನನಿತ್ಯ ಕಿರಿಕಿರಿಯಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇನ್ನಾದರು ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸುತ್ತಾರೋ ಕಾದು ನೋಡಬೇಕಾಗಿದೆ.