ರಿಪ್ಪನ್‌ಪೇಟೆ ; ರೈಲಿಗೆ ಸಿಲುಕಿ ವ್ಯಕ್ತಿ ಸಾವು !
ರಿಪ್ಪನ್‌ಪೇಟೆ: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನೆವಟೂರು ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನೆವಟೂರು ನಿವಾಸಿ ಸುರೇಶ್ ಆಚಾರಿ (43) ಎಂದು ಗುರುತಿಸಲಾಗಿದೆ.
ಬೆಂಗಳೂರು – ತಾಳಗುಪ್ಪ ಮಾರ್ಗದ ಅರಸಾಳು-ಆನಂದಪುರ ಮಧ್ಯದಲ್ಲಿನ ನೆವಟೂರು ಗ್ರಾಮದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು ಮೃತ ದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ಮನೆಗೆ ರವಾನಿಸಲಾಗಿದೆ.

ರೈಲ್ವೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.