ರಿಪ್ಪನ್‌ಪೇಟೆ : ಸಮೀಪದ ಶ್ರೀ ನಾರಾಯಣಗುರು ಮಹಾಸಂಸ್ಥಾನಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಸಂಜೆ ಭೇಟಿ ನೀಡಿ ಶ್ರೀ ರೇಣುಕಾನಂದ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ಸಹಕರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರರವರಿಗೆ ಶ್ರೀ ನಾರಾಯಣಗುರು ಮಹಾಸಂಸ್ಥಾನದ ವತಿಯಿಂದ ರೇಣುಕಾನಂದ ಸ್ವಾಮೀಜಿಗಳು ಗೌರವ ಸಮರ್ಪಣೆ ಸಲ್ಲಿಸಿ ಮಾತನಾಡಿ, ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರಕಾರದಿಂದ ಆದೇಶವಾಗಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಡಿಗ ಬಿಲ್ಲವ ಸೇರಿದಂತೆ ನಮೂದಾಗಿರುವ 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶ ನೀಡಿರುವುದು ಶ್ರೀ ನಾರಾಯಣ ಗುರು ಭಕ್ತರು ಗಳಿಗೆ ಸಂತಸದ ಸಂಗತಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮಂತ್ರಿಗಳಾದ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪರವರಿಗೆ ಅಭಿನಂದನೆ ಸಲ್ಲಿಸಿದರು.
ನಿಟ್ಟೂರಿನ ಶ್ರೀ ನಾರಾಯಣಗುರು ಮಹಾಸಂಸ್ಥಾನ ಮಠದ ಭಕ್ತಾಧಿಗಳಾದ ದಿನೇಶ್, ಮಹೇಶ್, ಲಿಂಗರಾಜು, ರಮೇಶ್, ಕಾಶಿನಾಥ್ ಇನ್ನಿತರರಿದ್ದರು.