ರಿಪ್ಪನ್‌ಪೇಟೆ: ಇದೇ ಫೆಬ್ರವರಿ 27 ರಂದು ಶಿವಮೊಗ್ಗದಲ್ಲಿ ಉದ್ಘಾಟನೆಯಾಗಲಿರುವ ವಿಮಾನ ನಿಲ್ದಾಣ ಮತ್ತು ಇಂದು ಮಂಗಳೂರು ಜಿಲ್ಲೆ ವ್ಯಾಪ್ತಿಯಗೆ ಭೇಟಿ ನೀಡುತ್ತಿರುವ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ಸಂಸದ ಬಿ.ವೈ.ರಾಘವೇಂದ್ರರವರನ್ನು ಮಾರ್ಗ ಮಧ್ಯದ ರಿಪ್ಪನ್‌ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿನಾಯಕ ವೃತ್ತದಲ್ಲಿ ಅದ್ದೂರಿಯಾಗಿ ಸ್ವಾಗತಿಸಿ ಪ್ರಯಾಣಕ್ಕೆ ಶುಭಕೋರಿದ್ದರು.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದರು, ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಭರದಿಂದಸಾಗಿದ್ದು ಇದೇ 27 ರಂದು ಜನಪ್ರಿಯ ಪ್ರಧಾನಿ ನರೇಂದ್ರ ಮೋದಿಜಿ ಲೋಕಾರ್ಪಣೆ ಮಾಡಲಿದ್ದಾರೆ ಅದಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿದ್ದು ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿ ಏರ್‌ಪೋರ್ಟ್ ಬಳಿ ಪ್ರಯೋಗಿಕವಾಗಿ ಸಿದ್ದತೆ ನಡೆಸಲಾಗುತ್ತಿದ್ದು ನಮ್ಮೂರಿನ ಹೆಮ್ಮೆ ಎಂದು ಹರ್ಷ ವ್ಯಕ್ತಪಡಿಸಿ ಗ್ರಾಮೀಣ ಜನರು ಕಡಿಮೆ ಸಮಯದಲ್ಲಿ ವಿವಿಧ ಕಡೆಗಳಿಗೆ ಹೋಗಿ ಬರುವಂತಾಗಲಿದೆ ಈ ವ್ಯವಸ್ಥೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕ್ ಪಂಚಾಯ್ತಿ ಮಾಜಿ ಅಧ್ಯಕ್ಷೆ ನಾಗರತ್ನ ದೇವರಾಜ್, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಪಕ್ಷದ ಮುಖಂಡರಾದ ಬೆಳ್ಳೂರು ತಿಮ್ಮಪ್ಪ, ಎಂ.ಸುರೇಶ್ ಸಿಂಗ್, ಕಗ್ಗಲಿ ನಿಂಗಪ್ಪ, ಸುಂದರೇಶ್, ಸುಧೀಂದ್ರ ಪೂಜಾರಿ, ಮಲ್ಲಾಪುರ ನಾಗರಾಜಗೌಡ, ಎಪಿಎಂಸಿ ನಿರ್ದೇಶಕ ರಾಮಚಂದ್ರ,ಕುಷನ್ ದೇವರಾಜ್, ಮಹೇಶ ಮಣಿಕೆರೆ, ಈಶ್ವರಶೆಟ್ಟಿ, ಕೇತಾರ್ಜಿರಾವ್ ಇನ್ನಿತರ ಹಲವಾರು ಕಾರ್ಯಕರ್ತರು ಹಾಜರಿದ್ದರು.