ರಿಪ್ಪನ್‌ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರು ಗ್ರಾಮದ ಸಮಾಜವಾದಿ ಹೋರಾಟಗಾರ ಶಾಂತವೇರಿ ಗೋಪಾಲಗೌಡರ ಅನುಯಾಯಿ ನಾರಾಯಣಪ್ಪ ಗೌಡ (94) ಇಂದು ಮುಂಜಾನೆ ನಿಧನರಾದರು.
ಸರಳ ಸಜ್ಜನಿಕೆ ಹಾಗೂ ಪ್ರಾಮಾಣಿಕತೆಯ ಮೂಲಕ ಜನಾನುರಾಗಿಯಾದ್ದ ಕಲ್ಲೂರು ನಾರಾಯಣಪ್ಪ ಗೌಡ ಶಾಂತವೇರಿ ಗೋಪಾಲಗೌಡರ ಅನುಯಾಯಿ ಆಗಿದ್ದರು. ಕೆಲವು ದಶಕಗಳ ಹಿಂದೆ ಹೆದ್ದಾರಿಪುರದಲ್ಲಿ ಸರ್ಕಾರಿ ಪ್ರೌಢ ಶಾಲೆಯನ್ನು ಸ್ಥಾಪಿಸಿ ಅದರ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಕಲ್ಲೂರು ಹಾಗೂ ಹೆದ್ದಾರಿಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು.
ಮೃತರಿಗೆ ಪತ್ನಿ ಹಾಗೂ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರದ ಉಪನ್ಯಾಸಕ ಕೆ.ಎನ್ ಶಂಕ್ರಪ್ಪ ಸೇರಿದಂತೆ ಮೂವರು ಪುತ್ರರಿದ್ದಾರೆ.
ಸಂತಾಪ :
ಕಲ್ಲೂರು ನಾರಾಯಣಪ್ಪ ಗೌಡರ ನಿಧನಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಶಿಕ್ಷಣ ಮಂತ್ರಿ ಕಿಮ್ಮನೆ ರತ್ನಾಕರ್, ಹೊಸನಗರ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ. ಬಿ.ಲಕ್ಷ್ಮಣಗೌಡ. ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ ಮಂಜುನಾಥ್, ಕ್ಷೇತ್ರ ಶಿಕ್ಷಣ ಸಂಯೋಜಕ ಎನ್.ಜಿ ರಾಘವೇಂದ್ರ ಸೇರಿದಂತೆ ಅನೇಕ ಗಣ್ಯರು, ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.