ರಿಪ್ಪನ್‌ಪೇಟೆ: ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಸರೂರು ಮಾಣಿಕೆರೆ ನಾಗೇಂದ್ರಪ್ಪಗೌಡರಿಗೆ ಸೇರಿದ ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಹೋದ ಘಟನೆ ಇಂದು ನಡೆದಿದೆ.
ಸುಮಾರು ಐವತ್ತು ಸಾವಿರ ರೂ. ಮೌಲ್ಯದ ಹುಲ್ಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿದ್ದು ಸ್ಥಳಕ್ಕೆ ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳದ ವಾಹನ ಬೆಂಕಿ ಅರಿಸಲು ಪ್ರಯತ್ನಿಸಿದರೂ ಎನ್ನಲಾಗಿದೆ.
ಮಸರೂರು ವೀರಭದ್ರಸ್ವಾಮಿಗೆ ರುದ್ರಾಭಿಷೇಕ ಅರ್ಚನೆ :
ರಿಪ್ಪನ್‌ಪೇಟೆ: ಇಲ್ಲಿಗೆ ಸಮೀಪದ ಮಸರೂರು ಶ್ರೀ ವೀರಭದ್ರೇಶ್ವರ ಸ್ವಾಮಿ ಸೇವಾ ಸಮಿತಿಯವರು ಮಳಲಿಮಠದ ಡಾ.ಗುರುನಾಗಭೂಷಣ ಸಿವಾಚಾರ್ಯ ಮಹಾಸ್ವಾಮಿಗಳ ದಿವ್ಯಸಾನಿದ್ಯದಲ್ಲಿ ಫೆಬ್ರವರಿ 5 ರಂದು ಭಾನುವಾರ ಬೆಳಗ್ಗೆ 8 ಗಂಟೆಗೆ ಶ್ರೀ ವೀರಭದ್ರೇಶ್ವರ ಸ್ವಾಮಿಗೆ ರುದ್ರಾಭಿಷೇಕ ಮತ್ತು ಅರ್ಚನೆಯನ್ನು ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಂತರ ಧಾರ್ಮಿಕ ಸಭಾ ಕಾರ್ಯಕ್ರಮದ ಸಾನಿಧ್ಯವಹಿಸಿ ಆಶೀರ್ವಚನ ನೀಡುವರು.
ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದ್ದು ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸಕಲ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೇವಾ ಸಮಿತಿಯವರು ಮನವಿ ಮಾಡಿದ್ದಾರೆ.