ಹುಲ್ಲು ಕೊಯ್ಯುವಾಗ ಹಾವು ಕಚ್ಚಿ ವೃದ್ಧೆ ಸಾವು..!
ರಿಪ್ಪನ್‌ಪೇಟೆ: ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಹುಲ್ಲು ಕೊಯ್ಯುವ ವೇಳೆ ಆಕಸ್ಮಿಕ ಹಾವು ಕಚ್ಚಿ ವೃದ್ದೆ ಸಾವನ್ನಪ್ಪಿರುವ ಘಟನೆ ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯ ಹರತಾಳು ಸಮೀಪದ ಕೆ.ಹುಣಸವಳ್ಳಿ ಗ್ರಾಮದ ಮಡುವಳ್ಳಿ ಎಂಬಲ್ಲಿ ಶನಿವಾರ ನಡೆದಿದೆ.

ಜಯಮ್ಮ (72) ಹಾವು ಕಡಿತದಿಂದ ಮೃತಪಟ್ಟ ವೃದ್ದೆಯಾಗಿದ್ದು ಜಾನುವಾರುಗಳಿಗೆ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಶನಿವಾರ ಮಧ್ಯಾಹ್ನ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿದೆ ಕೂಡಲೇ ಆನಂದಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರುವಾಗ ಮಹಿಳೆ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.