ಹೃದಯಾಘಾತದಿಂದ ಆಟೋ ಚಾಲಕ ಸಾವು | ಅನಾರೋಗ್ಯದಿಂದ ಕೃಷಿಕ ಮೃತ್ಯು
ರಿಪ್ಪನ್‌ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಶಬರೀಶ್ ನಗರ ನಿವಾಸಿ ಆಟೋ ಚಾಲಕ ರಮೇಶ್ ಜೋಗಿ (52) ಅವರು ಮಂಗಳವಾರ ಬೆಳಗಿನಜಾವ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಗಾಂಧಿನಗರದ ಹಿಂದೂ ರುದ್ರಭೂಮಿಯಲ್ಲಿ ಮಂಗಳವಾರ ಸಂಜೆ ಜರುಗಿತು.
ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯ ಮಳಕೊಪ್ಪ ನಿವಾಸಿ ಕೃಷಿಕ ಕೃಷ್ಣೋಜಿ ರಾವ್ (78) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಮೃತರಿಗೆ ಓರ್ವ ಪುತ್ರ ಇದ್ದಾರೆ.
ಕೆರೆಹಳ್ಳಿಯ ಮರಾಠ ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.