ರಿಪ್ಪನ್ಪೇಟೆ : ಪಟ್ಟಣದ ಸಮೀಪದ ಗವಟೂರು ಗ್ರಾಮದ ಬೆಳಕೋಡಿನಲ್ಲಿ ಶನಿವಾರ ತಡರಾತ್ರಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವು ಒಂದನ್ನು ಗ್ರಾಮಸ್ಥರು ರಕ್ಷಣೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಶನಿವಾರ ತಡರಾತ್ರಿ ಒಂದು ಗಂಟೆಯ ಸಮಯದಲ್ಲಿ ಗವಟೂರು ಗ್ರಾಮದ ಬೆಳಕೋಡಿನಲ್ಲಿ ಒಂದು ಬೈಕ್ ಹಾಗು ಒಂದು ಲಗೇಜ್ ಗೂಡ್ಸ್ ಆಟೋ (KA15-9389) ಅನುಮಾಸ್ಪದವಾಗಿ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ಅನುಮಾನ ಬಂದು ಬೈಕಿನಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದಾಗ ಬೈಕಿನಲ್ಲಿ (KA14EY4148) ಸವಾರಿ ಮಾಡುತ್ತಿದ್ದ ವ್ಯಕ್ತಿ ಹಾಗೂ ಗೂಡ್ಸ್ ಆಟವನ್ನು ಚಾಲನೆ ಮಾಡುತ್ತಿದ್ದ ಚಾಲಕ ಬೈಕ್ ಹಾಗೂ ಗೂಡ್ಸ್ ಆಟೋವನ್ನು ಬಿಟ್ಟು ಪರಾರಿಯಾದಾಗ ಗ್ರಾಮಸ್ಥರು ಗೂಡ್ಸ್ ಆಟೋವನ್ನು ಪರಿಶೀಲಿಸಿದಾಗ ಹೋರಿ ಕರು ಒಂದನ್ನು ಹಿಂಸಾತ್ಮಕವಾಗಿ ಕಾಲುಗಳನ್ನು ಹಾಗು ಕುತ್ತಿಗೆಯನ್ನು ಹಗ್ಗದಿಂದ ಕಟ್ಟಿ ಹಾಕಿದ್ದರು.
ಗ್ರಾಮಸ್ಥರು ತಕ್ಷಣ ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪಿಎಸ್ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಆರೋಪಿಗಳು ಬಿಟ್ಟು ಹೋದ ವಾಹನಗಳನ್ನು ತಮ್ಮ ವಶಕ್ಕೆ ಪಡೆದುಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…