ಅಕ್ರಮ ಮದ್ಯ ಮಾರಾಟ ಅಂಗಡಿಗಳ ಮೇಲೆ ಪೊಲೀಸರ ದಾಳಿ ; ಇಬ್ಬರ ಬಂಧನ

0 42


ರಿಪ್ಪನ್‌ಪೇಟೆ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಾಪುರ ಮತ್ತು ಬಾಳೂರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿಯನ್ನಾದರಿಸಿ ಪೊಲೀಸ್ ಸಬ್‌ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಸಿಬ್ಬಂದಿಗಳು ಅಂಗಡಿಯ ಮೇಲೆ ದಿಢೀರ್ ದಾಳಿ ನಡೆಸಿದ ಘಟನೆ ನಡೆದಿದೆ.


ಮಾದಾಪುರ ಗ್ರಾಮದ ಅಂಗಡಿಯೊಂದರ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ವಿಜಯ ಎಂಬುವರನ್ನು ವಶಕ್ಕೆ ಪಡೆಯುವ ಮೂಲಕ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.


ಇನ್ನೂ ಬಾಳೂರು ಗ್ರಾಮದ ಕಿರಾಣಿ ಅಂಗಡಿಯೊಂದರ ಮುಂಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಶ್ರೀನಿವಾಸ ಎಂಬಾತನನ್ನು ಬಂಧಿಸಿ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.


ಈ ದಾಳಿಯಲ್ಲಿ ಪಿಎಸ್‌ಐ ಪ್ರವೀಣ್ ಎಸ್.ಪಿ., ಸಿಬ್ಬಂದಿಗಳಾದ ಉಮೇಶ್, ಶಿವಕುಮಾರ್, ಸಂತೋಷ್ ಕೊರವರ ಮತ್ತು ಚಾಲಕ ಮಧುಸೂದನ್ ಇದ್ದರು.

Leave A Reply

Your email address will not be published.

error: Content is protected !!