Categories: Ripponpete

ಅರಸಾಳಿನಲ್ಲಿ ಎಕ್ಸ್‌ಪ್ರೆಸ್ ರೈಲುಗಳು ನಿಲುಗಡೆ | ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಿ ; ಬಿವೈಆರ್

ರಿಪ್ಪನ್‌ಪೇಟೆ : ಸಮೀಪದ ಅರಸಾಳು ಗ್ರಾಮದಲ್ಲಿನ ಮಾಲ್ಗುಡಿ ರೈಲ್ವೇ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲುಗಳು ನಿಲುಗೊಡೆ ಆಗುತ್ತಿವೆ ಆಗುತ್ತಿವೆ, ರೈಲ್ವೆ ಪ್ರಯಾಣಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ ವೈ ರಾಘವೇಂದ್ರ ಹೇಳಿದರು.

ಪಟ್ಟಣದ ವಿನಾಯಕರ ವೃತ್ತದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮಲೆನಾಡಿನ ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ರೈಲ್ವೆ ಪ್ರಯಾಣಿಕರಿಗೆ ಸದುಪಯೋಗವಾಗಲೆಂದು ಅರಸಾಳಿನ ಮಾಲ್ಗುಡಿ ರೈಲ್ವೇ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ರೈಲ್ವೆ ಇಲಾಖೆಯಿಂದ ಅನುಮತಿ ದೊರೆತಿದೆ.
ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ
ಹೊಸನಗರ, ರಿಪ್ಪನ್‌ಪೇಟೆ, ಹುಂಚ, ಕೋಣಂದೂರು, ನಿಟ್ಟೂರು, ಯಡೂರು, ಮಾಸ್ತಿಕಟ್ಟೆ, ರಾಮಚಂದ್ರಪುರ, ಹೊಂಬುಜ, ಕೋಡೂರು, ಸೂಡೂರು, ಚಿನ್ನಮನೆ, ನಗರ ರೋಡ್ ,ಹೀಗೆ ಸುತ್ತಮುತ್ತಲಿನ ಊರಿನ ಪ್ರಯಾಣಿಕರು ಅರಸಾಳು ರೈಲ್ವೆ ನಿಲ್ದಾಣ ಸಮೀಪವಿದ್ದರು ರೈಲಿಗಾಗಿ ಆನಂದಪುರ ಹೋಗುವ ಅನಿವಾರ್ಯತೆ ಇತ್ತು.

ಸಾರ್ವಜನಿಕರ ಹಾಗೂ ಪ್ರಯಾಣಿಕರ ಬಹು ವರ್ಷಗಳಿಂದ ಅರಸಾಳು (ಮಾಲ್ಗುಡಿ) ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆ ಮಾಡುವಂತೆ ಅನೇಕ ಬಾರಿ ರಿಪ್ಪನ್‌ಪೇಟೆ, ಅರಸಾಳು ಗ್ರಾಮದ ನಾಗರಿಕರು ಹಲವಾರು ಬಾರಿ ಮನವಿ ಸಲ್ಲಿಸಿ ಹೋರಾಟಗಳನ್ನು ಮಾಡಿದ್ದರು.
ಹಾಲಿ ಶಾಸಕರು ಹಾಗೂ ಮಾಜಿ ಮಂತ್ರಿಗಳಾದ ಆರಗ ಜ್ಞಾನೇಂದ್ರ, ಮತ್ತು ಮಾಜಿ ಮಂತ್ರಿಗಳಾದ ಹರತಾಳು ಹಾಲಪ್ಪರವರ ಈ ರೈಲ್ವೆ ನಿಲುಗಡೆಗೆ ಮನವಿಯನ್ನು ಸಲ್ಲಿಸಿದ್ದರು.


ಕೇಂದ್ರ ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್ ರವರು ಅರಸಾಳು ಮಾಲ್ಗುಡಿ ರೈಲ್ವೇ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಅವಕಾಶವನ್ನು ಕಲ್ಪಿಸಿ ಕೊಟ್ಟಿದ್ದಾರೆ, ಅವರಿಗೆ ಹಾಗೂ ರೈಲ್ವೆ ಇಲಾಖೆಗೆ ಮಲೆನಾಡಿನ ಜನತೆಯ ಪರವಾಗಿ ಧನ್ಯವಾದಗಳು ಅರ್ಪಿಸುತ್ತೇನೆ. ದಿನಾ ನಾಲ್ಕು ಮುಖ್ಯ ರೈಲುಗಳು ಈ ನಿಲ್ದಾಣದಲ್ಲಿ ನಿಲ್ಲಲಿದೆ ಎಂದರು.

ಪ್ರಾಯೋಗಿಕವಾಗಿ ನೀಡಲಾಗುತ್ತಿರುವ ಈ ನಿಲುಗಡೆಯನ್ನು ಸಮರ್ಥವಾಗಿ ಬಳಕೆ ಮಾಡಿಕೊಂಡಲ್ಲಿ ಮಾತ್ರ ಮುಂದಿನ ದಿನಗಳಲ್ಲಿ ಈ ನಿಲುಗಡೆಯನ್ನು ಮುಂದುವರೆಸುವ ಸಾಧ್ಯತೆಗಳಿರುವುದರಿಂದ ಪ್ರಯಾಣಿಕರು ಈ ಅಮೂಲ್ಯ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಗಣಪತಿ, ಎಂ.ಬಿ ಮಂಜುನಾಥ್. ಆಲವಳ್ಳಿ ವೀರೇಶ್, ಮೆಣಸೆ ಆನಂದ, ಕಗ್ಗಲಿ ಲಿಂಗಪ್ಪ, ಕೀರ್ತಿ ಗೌಡ, ರಾಜೇಶ್ ಜೈನ್, ಸುಧೀಂದ್ರ, ಪೂಜಾರಿ, ಪದ್ಮ ಸುರೇಶ್, ಲೀಲಾ ಶಂಕರ್, ನಾಗರತ್ನ ದೇವರಾಜ್ ಇನ್ನಿತರರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

5 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago