ಆ. 21 ರಂದು ನಾಗರಹಳ್ಳಿ ನಾಗೇಂದ್ರಸ್ವಾಮಿ ಜಾತ್ರಾ ಮಹೋತ್ಸವ

0 38


ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ನಾಗರಹಳ್ಳಿಯ ಶ್ರೀನಾಗೇಂದ್ರಸ್ವಾಮಿಯ ದೇವಸ್ಥಾನದಲ್ಲಿ ನಾಗರಪಂಚಮಿ ಹಬ್ಬದ ಅಂಗವಾಗಿ ಇದೇ ಆ. 21 ರಂದು ವಿಶೇಷ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಧರ್ಮದರ್ಶಿ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆಗಸ್ಟ್ 21 ರಂದು ಸೋಮವಾರ ಮುಂಜಾನೆ 6 ಗಂಟೆಯಿಂದ ಸಂಜೆಯವರೆಗೆ ಶ್ರೀ ನಾಗೇಂದ್ರಸ್ವಾಮಿ ಸನ್ನಿಧಿಯಲ್ಲಿ ಪವಮಾನ ಅಭಿಷೇಕ, ಕ್ಷೀರಾಭೀಷೇಕ, ಎಳನೀರು ಅಭಿಷೇಕ, ಕುಂಕುಮಾರ್ಚನೆ ಸೇವೆಯೊಂದಿಗೆ ವಿಶೇಷ ಅಲಂಕಾರ ಪೂಜಾ ಕೈಂಕರ್ಯಗಳು ಜರುಗಲಿದ್ದು ಈ ಜಾತ್ರಾ ಮಹೋತ್ಸವವು ವರ್ಷದಲ್ಲಿ ಎರಡು ಬಾರಿ ಆಚರಿಸಲಾಗುವ ಜಾತ್ರೆಯಲ್ಲಿ ಮದುವೆಯಾಗಿ ಸಂತಾನ ಭಾಗ್ಯಕರುಣಿಸುವಂತೆ ಮತ್ತು ಫಸಲು ರಕ್ಷಣೆ ಹಾಗೂ ಜನ-ಜಾನುವಾರುಗಳಿಗೆ ರೋಗ ರುಜಿನೆ ಬಾರದಂತೆ ಮತ್ತು ಯುವಕ-ಯುವತಿಯರಿಗೆ ಕಂಕಣ ಭಾಗ್ಯವನ್ನು ಕರುಣಿಸಲೇಂದ್ರ ಶ್ರೀನಾಗೇಂದ್ರಸ್ವಾಮಿಯಲ್ಲಿ ಪ್ರಾರ್ಥಿಸಿ ಹಣ್ಣು-ಕಾಯಿ ಸಮರ್ಪಿಸುವುದು ಇಲ್ಲಿನ ವಿಶೇಷವಾಗಿದ್ದು ಈ ಜಾತ್ರಾ ಮಹೋತ್ಸವಕ್ಕೆ ಸಮಸ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀನಾಗೇಂದ್ರ ಸ್ವಾಮಿಯ ದರ್ಶನಾಶೀರ್ವಾದ ಪಡೆದುಕೊಳ್ಳುವಂತೆ ದೇವಸ್ಥಾನ ಧರ್ಮದರ್ಶಿ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಳಲಿಮಠದಲ್ಲಿ ನಾಗರಪಂಚಮಿ ವಿಶೇಷ ಪೂಜಾ ಕಾರ್ಯಕ್ರಮ
ರಿಪ್ಪನ್‌ಪೇಟೆ: ಇದೇ ಆಗಸ್ಟ್ 21 ರಂದು ನಾಗರ ಪಂಚಮಿ ಹಬ್ಬದ ಆಂಗವಾಗಿ  ಇತಿಹಾಸ ಪ್ರಸಿದ್ದ ಮಳಲಿಮಠದಲ್ಲಿ ಗುರುನಾರ್ಗಾನ ಸ್ವಾಮಿಗೆ ಮಳಲಿಮಠದ ಪಟ್ಯಾಧ್ಯಕ್ಷರಾದ ಶ್ರೀ ಷ.ಬ್ರ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿಯವರ ದಿವ್ಯಸಾನಿಧ್ಯವದಲ್ಲಿ ಮಹಾರುದ್ರಾಭಿಷೇಕ ಅಭಿಷೇಕ ವಿಶೇಷ ಪೂಜಾ ಕಾರ್ಯಕ್ರಮ ಜರುಗಲಿದೆ.

ಈ  ವಿಶೇಷ ನಾಗರಪಂಚಮಿಯ ಅಂಗವಾಗಿ ಧಾರ್ಮಿಕ ಪೂಜಾ ಕೈಂಕರ್ಯಗಳು  ಜರುಗಲಿದ್ದು ಸಮಸ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ದರ್ಶನಾಶೀರ್ವಾದ ಪಡೆದುಕೊಳ್ಳುವಂತೆ ಮಠದ ಪ್ರಕಟಣೆ ತಿಳಿಸಿದೆ.

Leave A Reply

Your email address will not be published.

error: Content is protected !!