Categories: Ripponpete

ಕ್ಯಾಂಟೀನ್ ಮಾಲೀಕನಿಗೆ ಬೋಂಡಾ ತಯಾರಿಕೆಯ ಬಗ್ಗೆ ತರಬೇತಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ : ಸರಳ ಸಜ್ಜನಿಕೆಯ ಮೂಲಕ ಜನಸಾಮಾನ್ಯರ ಶಾಸಕರಾಗಿ ಆಯ್ಕೆಯಾದ ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಬೋಂಡಾ ತಯಾರಿಕೆಯ ಬಗ್ಗೆ ತರಬೇತಿ ನೀಡಿದ ಘಟನೆ ಬುಧವಾರ ರಿಪ್ಪನ್‌ಪೇಟೆ ಪಟ್ಟಣದಲ್ಲಿ ನಡೆದಿದೆ.


ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರ ಅತಿವೃಷ್ಟಿ ಸಮಾಲೋಚನಾ ಸಭೆಯಲ್ಲಿ ಭಾಗವಹಿಸುವುದರ ಸಲುವಾಗಿ ಸಚಿವರು ಬರುವುದಕ್ಕಿಂತ ಮುಂಚಿತವಾಗಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿಗೆ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಮಾನಿ ಬಳಗದವರು ಗ್ರಾಮ ಪಂಚಾಯಿತಿ ಸಮೀಪದಲ್ಲಿರುವ ಬೃಂದಾವನ ಕ್ಯಾಂಟೀನ್ ನಲ್ಲಿ ಕಾಫಿ ಕುಡಿಯಲು ಆಹ್ವಾನಿಸಿದ ಹಿನ್ನಲೆಯಲ್ಲಿ ಕ್ಯಾಂಟೀನಿಗೆ ಭೇಟಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಅಭಿಮಾನಿ ಬಳಗದವರ ಜೊತೆಯಲ್ಲಿ ಕಾಫಿ ಬೋಂಡವನ್ನು ಸೇವಿಸಿದರು.


ನಂತರ ರುಚಿ ರುಚಿಯಾದ ಬೋಂಡವನ್ನು ತಯಾರಿಸುವುದರ ಕುರಿತು ಕ್ಯಾಂಟೀನ್ ಮಾಲೀಕನಿಗೆ ತರಬೇತಿ ನೀಡಿದ ಅವರು, ರುಚಿ ರುಚಿಯಾದ ಬಿಸಿ ಬಿಸಿ ತಿಂಡಿಗಳನ್ನು ತಯಾರಿಸಿ ಮಾರಾಟ ಮಾಡಿದರೆ ಗ್ರಾಹಕರು ನಿಮ್ಮ ಹೋಟೆಲ್ ಅನ್ನು ಹುಡುಕಿಕೊಂಡು ಬರುತ್ತಾರೆ. ಹಾಗೆಯೇ ನಿಮಗೂ ಒಳ್ಳೆಯ ಕೀರ್ತಿ ಬರುತ್ತದೆ ಎಂದು ಕ್ಯಾಂಟೀನ್ ಮಾಲೀಕರಾದ ಸ್ವಾಮಿಯವರಿಗೆ ಸಲಹೆ ನೀಡಿದರು.


ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಕೆಲವೊಂದು ಅಡುಗೆ ಮತ್ತು ತಿಂಡಿಗಳ ತಯಾರಿಕೆಯ ಬಗ್ಗೆ ಅನುಭವವಿದ್ದು ರುಚಿ ಮತ್ತು ಶುಚಿಯಾದ ಆಹಾರವನ್ನು ಸೇವಿಸುವುದರಿಂದ ಉತ್ತಮ ಆರೋಗ್ಯವನ್ನು ಹೊಂದಬಹುದು. ಹಾಗೆಯೇ ಚಿಕ್ಕ ಚಿಕ್ಕ ಕ್ಯಾಂಟೀನ್ ಗಳಲ್ಲಿ ಗುಣಮಟ್ಟದ ಆಹಾರ ಪದಾರ್ಥಗಳನ್ನು ತಯಾರು ಮಾಡಿ ಮಾರಾಟ ಮಾಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ಬೇಳೂರು ಗೋಪಾಲಕೃಷ್ಣ ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ಕ್ಯಾಂಟೀನ್ ಮುಂದೆ ನೆರೆದಿದ್ದರು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

1 week ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago