Categories: Ripponpete

ಗರ್ತಿಕೆರೆ ವ್ಯಕ್ತಿಯಲ್ಲಿ ಮಂಗನ ಕಾಯಿಲೆ ಸೋಂಕು ಪತ್ತೆ ಶಂಕೆ !

ರಿಪ್ಪನ್‌ಪೇಟೆ : ಗರ್ತಿಕೆರೆಯ 45 ವರ್ಷದ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದ್ದು, ಇವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜ.26 ರಂದು ವಿಪರೀತ ಜ್ವರದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಇವರಿಗೆ ಕಳೆದ ನಾಲ್ಕೈದು ದಿನಗಳಿಂದ ಜ್ವರ ಕಡಿಮೆ ಆಗಿರಲಿಲ್ಲ. ನಿನ್ನೆ ಆರ್ ಟಿ ಪಿ ಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರ್ ಟಿ ಪಿ ಸಿಆರ್ ಪರೀಕ್ಷೆಯಲ್ಲಿ ಕೆಎಫ್ ಡಿ ನೆಗೆಟಿವ್ ಬಂದಿದೆ. ಆರ್ ಟಿ ಪಿ ಸಿ ಆರ್ ಪಾಸಿಟಿವ್ ಬಂದರೆ ಮಾತ್ರ ಅದನ್ನ ಕೆಎಫ್ ಡಿ ಪ್ರಕರಣವೆಂದು ಪರಿಗಣಿಸಲಾಗುತ್ತದೆ. ಆದರೆ ಇತರೆ ರಕ್ತ ಪರೀಕ್ಷೆಯಲ್ಲಿ ಆತನಿಗೆ ಕೆಎಫ್ ಡಿ ಇದೆ ಎಂದು ವೈದ್ಯರು ಬರೆದಿರುವ ಕಾರಣ ಇದನ್ನ ಶಂಕಿತ ಪ್ರಕರಣವೆಂದು ಪರಿಗಣಿಸಲಾಗಿದೆ.

https://malnadtimes.in/?p=2155

ಎರಡು ವರ್ಷಗಳಿಂದ ಮಲೆನಾಡಿನಲ್ಲಿ ಕೆ ಎಫ್ ಡಿ ಪ್ರಕರಣ ಅತೀ ಹೆಚ್ಚು ದಾಖಲಾಗಿತ್ತು. ಆದರೆ ಈ ವರ್ಷ ಇದು ಎರಡನೇ ಪ್ರಕರಣವಾಗಿದೆ. ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಮೂಲದ ವ್ಯಕ್ತಿಯಲ್ಲಿ ಕೆಎಫ್ ಡಿ ಸೋಂಕು ಪತ್ತೆಯಾಗಿತ್ತು.

Malnad Times

Recent Posts

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

3 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

7 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

19 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

22 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

23 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

1 day ago