ಗೌಡಕೊಪ್ಪ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0 39

ರಿಪ್ಪನ್‌ಪೇಟೆ : ಕೋಡೂರು ಗ್ರಾ.ಪಂ. ವತಿಯಿಂದ ಗೌಡಕೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಶಾಲಾ ಆವರಣದಲ್ಲಿ ಗಿಡ ನೆಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕಿ ಅಂಬಿಕಾ ಸಂತೋಷ್, ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದು ಎಲ್ಲರ ಕರ್ತವ್ಯವಾಗಿದೆ. ಪರಿಸರವನ್ನು ಉಳಿಸಿದರೆ ಮಾತ್ರ ನಮಗೆ ಆರೋಗ್ಯವಾದ ಜೀವನ ನಡೆಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಗ್ರಾ.ಪಂ ಉಪಾಧ್ಯಕ್ಷ ಜಯಪ್ರಕಾಶ್ ಮಾತನಾಡಿ, ವಿದ್ಯಾರ್ಥಿ ಜೀವನದಿಂದಲೇ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ಕನಿಷ್ಠ ಒಂದು ಗಿಡವನ್ನು ನೆಟ್ಟು ಬೆಳೆಸಬೇಕಾಗಿದೆ. ನಶಿಸಿ ಹೋಗುತ್ತಿರುವ ನಮ್ಮ ಪರಿಸರವನ್ನು ಉಳಿಸಿ, ಬೆಳೆಸಬೇಕಾಗಿರುವುದು ಎಲ್ಲರ ಜವಬ್ದಾರಿಯಾಗಿದೆ. ಶಾಲೆಯ ಪರಿಸರವನ್ನು ಶುಚಿತ್ವದಿಂಡುವುದು ವಿದ್ಯಾರ್ಥಿಗಳು ಕರ್ತವ್ಯವಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ನೆನಪಿಗಾಗಿ ಗಿಡವನ್ನು ನೆಟ್ಟು ಬೆಳೆಸಬೇಕು. ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಿಸಿ, ವಿದ್ಯಾರ್ಥಿ ಜೀವನದಿಂದಲೇ ಪರಿಸರ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಪ್ರೇರಣ ಸ್ವಯಂ ಸೇವಕ ಸಂಘದಿಂದ ಪ್ಲಾಸ್ಟಿಕ್ ಕಸ ನಿರ್ವಹಣೆ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷೆ ಸುನಂದ, ಸದಸ್ಯರಾದ ಶೇಖರಪ್ಪ, ಮಂಜಪ್ಪ, ಅನ್ನಪೂರ್ಣ, ಶ್ಯಾಮಲಾ, ಉಮೇಶ್, ಸುಧಾಕರ, ಯೋಗೇಂದ್ರಪ್ಪ, ಪಿಡಿಒ ನಾಗರಾಜ್, ಗ್ರಾ.ಪಂ. ಕಾರ್ಯದರ್ಶಿ, ಗ್ರಾ.ಪಂ ಸಿಬ್ಬಂದಿವರ್ಗ, ಶಾಲಾ ಸಹ ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು ಮತ್ತು ವಿದ್ಯಾರ್ಥಿಗಳು ಇದ್ದರು.

Leave A Reply

Your email address will not be published.

error: Content is protected !!