Categories: Ripponpete

ಜೆಡಿಎಸ್ ಅಭ್ಯರ್ಥಿಯ ತೇಜೋವಧೆಗೆ ಕಾಂಗ್ರೆಸ್ ಪಕ್ಷದವರಿಂದ ಹುನ್ನಾರ ; ಆರೋಪ

ರಿಪ್ಪನ್‌ಪೇಟೆ: ಮೇ 10 ರಂದು ನಡೆಯುವ ವಿಧಾನಸಭಾ ಕ್ಷೇತ್ರದ ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ರಾಜಾರಾಂ ವಿರುದ್ದ ಕಾಂಗ್ರೆಸ್ ಪಕ್ಷದವರು ಇಲ್ಲಸಲ್ಲದ ಆರೋಪ ನಡೆಸುತ್ತಾ ನನ್ನ ತೇಜೋವಧೆ ಮಾಡುವ ಹುನ್ನಾರ ನಡೆಸುತ್ತಿದ್ದಾರೆಂದು ಜೆಡಿಎಸ್ ಪಕ್ಷದ ಅಭ್ಯರ್ಥಿ ಯಡೂರು ರಾಜಾರಾಂ ಆರೋಪಿಸಿದರು.

ಹುಂಚಾ ಹೋಬಳಿ ವ್ಯಾಪ್ತಿಯ ಹುಂಚ, ಹೆದ್ದಾರಿಪುರ, ಕೋಡೂರು, ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಲವು ಗ್ರಾಮಗಳಿಗೆ ಭೇಟಿ ನೀಡಿ ಮತಯಾಚಿಸಿ ಕಲ್ಲೂರು ಗ್ರಾಮದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ, ರಾಜ್ಯಕ್ಕೆ ಬೆಳಕು ನೀಡುವ ಉದ್ದೇಶದಿಂದಾಗಿ ಶರಾವತಿ ಚಕ್ರಾ, ವರಾಹಿ, ಸಾವೇಹಕ್ಲು, ಮುಳುಗಡೆ ಸಂತ್ರಸ್ತರ ಸಮಸ್ಯೆಗಳು ಕ್ಷೆತ್ರದಲ್ಲಿ ಇಂದಿಗೂ ಜೀವಂತವಾಗಿವೆ. ಕ್ಷೇತ್ರದ ಜ್ವಲಂತ ಸಮಸ್ಯೆಗಳಿಗೆ ಸೂಕ್ತ ಕಲ್ಪಿಸುವಲ್ಲಿ ಕಳೆದ ನಾಲ್ಕು ದಶಕಗಳಿಂದ ಆಡಳಿತ ನಡೆಸಿದ ಎಲ್ಲಾ ರಾಷ್ಟ್ರೀಯ ಪಕ್ಷಗಳ ಜನಪ್ರತಿನಿಧಿಗಳು ಸೋತಿದ್ದಾರೆ. ಇದಕ್ಕಾಗಿ ಈ ಭಾರಿ ಜೆಡಿಎಸ್ ಪಕ್ಷದ ಆಭ್ಯರ್ಥಿಗೆ ತಮ್ಮ ಮತ ನೀಡುವ ಮೂಲಕ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಆಶೀರ್ವದಿಸಬೇಕೇಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಂ ಮತದಾರರಲ್ಲಿ ಮನವಿ ಮಾಡಿದರು.

ಬರೀ ರಸ್ತೆ, ಚರಂಡಿ, ಮೋರಿ ಸೇತುವೆ ನಿರ್ಮಾಣದಿಂದ ಕ್ಷೇತ್ರದ ಅಭಿವೃದ್ದಿ ಸಾಧ್ಯವಿಲ್ಲ. ದುಡಿಯುವ ಕೈಗಳಿಗೆ ಕೆಲಸದ ಅವಶ್ಯಕತೆ ಇದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಗಲಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಆಗಲಿ ಕ್ಷೇತ್ರಕ್ಕೆ ಈವರೆಗೂ ಯಾವುದೇ ಕೈಗಾರಿಕೆ ಕಾರ್ಖಾನೆಗಳನ್ನು ತರುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಇದರಿಂದಾಗಿ ಯುವ ವಿದ್ಯಾವಂತ ಯುವ ಸಮೂಹ ಮಹಾನಗರಗಳತ್ತ ಮುಖಮಾಡಿದ್ದಾರೆ. ಯುವ ಸಮೂಹ ಸ್ಥಳೀಯ ಕೊಂಡಿ ಕಳಚದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಪ್ರತಿಯೊಬ್ಬ ನಾಗರೀಕನ ಮೇಲಿದೆ. ಅಲ್ಲದೆ ಸ್ಥಳೀಯವಾಗಿ ಉದ್ಯೋಗ ಸೃಷ್ಠಿಯ ಅಗತ್ಯತೆಯೂ ಇದೆ. ಆದರೆ ಇಂತಹ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳದೇ ಹಾಲಿ ಹಾಗೂ ಮಾಜಿ ಶಾಸಕರು ಇದು ಕೊನೆಯ ಚುನಾವಣೆ ದಯಮಾಡಿ ಗೆಲ್ಲಿಸಿ ಎಂದು ಮತದಾರರಲ್ಲಿ ಗೀಳಿಡುತ್ತಿರುವುದು ನೋವಿನ ಸಂಗತಿಯಾಗಿದೆ ಎಂದು ಆರೋಪಿಸಿದರು.

ಆಧಿಕಾರ ಇರಲಿ ಇಲ್ಲದೇ ಇರಲಿ ನಾನು ಜನನಾಯಕ ಕುಮಾರಣ್ಣ ಪಕ್ಷವನ್ನು ಬಿಡದೇ ನನ್ನ ಉಸಿರಿರುವವರೆಗೂ ನಾನು ಜೆಡಿಎಸ್ ಪಕ್ಷದಲ್ಲಿದ್ದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಸ್ಪಂದಿಸುವುದಾಗಿ ತಿಳಿಸಿ ಎಂತಹ ಸಮಸ್ಯೆ ಎದುರಾದರೂ ಎದುರಿಸುವುದಾಗಿ ಹೇಳಿ ಶಾಂತವೇರಿ ಗೋಪಾಲಗೌಡರ ಭಾವಚಿತ್ರವನ್ನು ಹಿಡಿದುಕೊಂಡು ಬಾವುಕರಾಗುವುದರೊಂದಿಗೆ ಗಳಗಳನೇ ಬಿಕ್ಕಳಿಸಿ ಕಣ್ಣೀರು ಹಾಕಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಕಲ್ಲೂರು ಎರಡನೇ ಹಾಸನವೆಂದು ಹೇಳಿ ಇಲ್ಲಿನ ಮತದಾರರು ಸದಾ ಜೆಡಿಎಸ್ ಮುಖಂಡ ದೇವೇಗೌಡರು ಮತ್ತು ಕುಮಾರಣ್ಣನವರ ಕೈಬಿಡದೇ ಭದ್ರಕೋಟೆಯನ್ನಾಗಿಸಿದ್ದಾರೆಂದರು.

ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎನ್.ವರ್ತೇಶ್, ಕಾರ್ಯದರ್ಶಿ ತ್ರಿಣಿವೆ ಜಯರಾಂಶೆಟ್ಟಿ, ತೀರ್ಥಹಳ್ಳಿ ತಾಲ್ಲೂಕಿನ ಪಕ್ಷದ ಪ್ರಮುಖ ರಾಘವೇಂದ್ರ ತೆಲಗಿ, ಕಲ್ಲೂರು ಈರಪ್ಪ, ಪ್ರವೀಣ್ ಕಟ್ಟೆ‌ ಪಕ್ಷದ ಇನ್ನಿತರ ಮುಖಂಡರು ಹಾಜರಿದ್ದರು.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

10 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

13 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

13 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

18 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

20 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago