ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮ | ನಾಗರಹಳ್ಳಿ ಸಭಾಭವನ ಲೋಕಾರ್ಪಣೆ

0 34

ರಿಪ್ಪನ್‌ಪೇಟೆ: ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಿ ತಂಬಾಕು ಸೇವನೆಯನ್ನು ಮುಕ್ತಗೊಳಿಸುವ ಉದ್ದೇಶವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯ ಹೊಸನಗರ ತಾಲ್ಲೂಕು ಯೋಜನಾಧಿಕಾರಿ ಬೇಬಿ ಹೇಳಿದರು.

ರಿಪ್ಪನ್‌ಪೇಟೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಹೊಸನಗರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಇವರ ಸಹಯೋಗದಲ್ಲಿ ಆಯೋಜಿಸಲಾದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ತಂಬಾಕು ಉತ್ಪನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಮತ್ತು ಅಗಾಗ ಜನರು ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳುವುದು ಮುಖ್ಯವಾಗಿದೆ ಎಂದರು.

ಉಪಪ್ರಾಚಾರ್ಯ ರತ್ನಾಕರ್ ಕೆಸಿನಮನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಕ ರಾಮಕೃಷ್ಣ, ಎಸ್‌ಡಿಎಂಸಿ ಆಧ್ಯಕ್ಷರಾದ ಹೆಚ್.ವಿ.ಪ್ರಶಾಂತ ವಲಯ ಮೇಲ್ವಿಚಾರಕಿ ಜಯಲಕ್ಷ್ಮಿ, ಸೇವಾ ಪ್ರತಿನಿಧಿಗಳು ಶಾಲಾ ಶಿಕ್ಷಕವರ್ಗ ಹಾಜರಿದ್ದರು.

ನಾಗರಹಳ್ಳಿ ಸಭಾಭವನ ಲೋಕಾರ್ಪಣೆ

ರಿಪ್ಪನ್‌ಪೇಟೆ: ಸಮೀಪದ ನಾಗರಹಳ್ಳಿ ಇತಿಹಾಸ ಪ್ರಸಿದ್ದ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದ ಬಳಿ ಶಾಸಕರ ವಿಶೇಷ ಅನುದಾನದಡಿಯಲ್ಲಿ ನಿರ್ಮಿಸಲಾಗಿರುವ ನೂತನ ಸಭಾಭವನದ ಲೋಕಾರ್ಪಣಾ ಸಮಾರಂಭವನ್ನು ಜೂನ್ 6 ರಂದು ಭಾನುವಾರ ಬೆಳಗ್ಗೆ ಆಯೋಜಿಸಲಾಗಿದೆ ಎಂದು ದೇವಸ್ಥಾನ ಧರ್ಮದರ್ಶಿ ಸಮಿತಿಯ ಅಧ್ಯಕ್ಷ ಗೇರುಗಲ್ಲು ಸತೀಶ್ ತಿಳಿಸಿದರು.

ನೂತನ ಸಭಾಭವನದ ಉದ್ಘಾಟನೆಯನ್ನು ಮಾಜಿ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ಹುಂಚ ಗ್ರಾ.ಪಂ.ಅಧ್ಯಕ್ಷೆ ಪಲ್ಲವಿ ಚೇತನ್, ಉಪಾಧ್ಯಕ್ಷ ದೇವೇಂದ್ರ ಜೈನ್, ಗ್ರಾ.ಪಂ.ಸದಸ್ಯ ರಾಘವೇಂದ್ರ ತೋಟದಕಟ್ಟು, ಸರೋಜ ನವೀನ ಭಾಗವಹಿಸುವರು.
ಇದೇ ಸಂದರ್ಭದಲ್ಲಿ ನಾಗೇಂದ್ರಸ್ವಾಮಿ ದೇವಸ್ಥಾನದ ಅರ್ಚಕರಾದ ಲಕ್ಷ್ಮಿನಾರಾಯಣಭಟ್, ನಾಗೇಂದ್ರರಾವ್, ಕಡಸೂರು ಅನಂತರಾಮ್, ಕೀಳಂಬಿ ಕೃಷ್ಣಮೂರ್ತಿ, ರಾಜೇಶ್ ಕೀಳಂಬಿ, ನಾಗಾರ್ಜುನಗೌಡ್ರು ಬನಶೆಟ್ಟಿಕೊಪ್ಪ, ನಾಗಮ್ಮ, ಲಲಿತ ಇವರನ್ನು ಸನ್ಮಾನಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!