Categories: Ripponpete

ಬತ್ತಿದ ಜಲ ಮೂಲಗಳು ; ರಣ ಬಿಸಿಲಿಗೆ ತತ್ತರಿಸಿದ ಮಲೆನಾಡ ಜನತೆ, ನೀರಿಗಾಗಿ ಹಾಹಾಕಾರ

ರಿಪ್ಪನ್‌ಪೇಟೆ: ನಡು ಮಲೆನಾಡಿನ ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಜೀವನಾಡಿಯಾಗಿರುವ ಶರಾವತಿ, ಕುಮುದ್ವತಿ, ಶರ್ಮಿಣ್ಯಾವತಿ, ಶರ್ಮಾಣಾವತಿ ನದಿಗಳು ಮಳೆಗಾಲದಲ್ಲಿ ಉಕ್ಕಿ ಹರಿಯುತ್ತಿದ್ದು ಈಗ ಬೇಸಿಗೆಯಲ್ಲಿ ಸಂಪೂರ್ಣವಾಗಿ ಬತ್ತಿ ಹೋಗಿ ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ಎದುರಾಗಿದ್ದು ಆಡಿಕೆ ತೋಟಗಳು ಸಹ ಒಣಗಿ ಹೋಗುತ್ತಿದ್ದು ಜನತೆ ತತ್ತರಿಸಿ ಹೋಗಿದೆ.

ನಡು ಮಲೆನಾಡಿನಲ್ಲಿ ಬೇಸಿಗೆ ಬಿಸಿಲ ತಾಪಮಾನ 37-38 ಡಿಗ್ರಿಯಷ್ಟು ತಲುಪಿದ್ದು ಬಿಸಿಲಿನ ಝಳಕ್ಕೆ ಜನರು ತತ್ತರಿಸಿದ್ದಾರೆ. ಕುಡಿಯಲು ನೀರಿಲ್ಲದೆ ಪರಿತಪಿಸುವಂತಹ ಸ್ಥಿತಿಯಲ್ಲಿ ರೈತರು ತಮ್ಮ ಜೀವನಾಡಿಯಾದ ಅಡಿಕೆ ತೋಟವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.

ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ, ಬಾಳೂರು, ಕೆಂಚನಾಲ, ಅರಸಾಳು, ಬೆಳ್ಳೂರು, ಹೆದ್ದಾರಿಪುರ, ಅಮೃತ, ಹುಂಚ, ಕೋಡೂರು, ಸೊನಲೆ, ಹರತಾಳು ಇನ್ನಿತರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಹಳ್ಳಿಗಳಲ್ಲಿ ಕುಡಿಯುವ ನೀರಿಗಾಗಿ ನಾಗರೀಕರು ಪರದಾಡುವ ಸ್ಥಿತಿ ಹೇಳದಂತಾಗಿದೆ.

ಇತ್ತೀಚೆಗೆ ಬಾಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಂದಾಳದಿಂಬ ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿಯಲ್ಲಿ ಪಂಚಾಯ್ತಿಗೆ ಸಾರ್ವಜನಿಕರು ಮನವಿ ಮಾಡಿಕೊಂಡ ಪರಿಣಾಮ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗಿದ್ದು ಕಲುಷಿತ ನೀರು ಸರಬರಾಜಿನಿಂದಾಗಿ ಪ್ರತಿಭಟನೆ ಸಹ ನಡೆದಿರುವ ಬೆನ್ನಲೇ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬರುವೆ, ಗವಟೂರು, ವಿನಾಯಕನಗರ, ಬನ್ನಿನಗರ, ಶಬರೀಶ್‌ನಗರ, ನೆಹರು ಬಡಾವಣೆ, ಶ್ರೀರಾಮನಗರ, ಬೆಳ್ಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಬುಕ್ಕಿವರೆ, ದೋಬೈಲು, ಕಳಸೆ, ನರ‍್ಲಿಗೆ, ತಳಲೆ, ಹಾರಂಬಳ್ಳಿ, ಕಲ್ಲೂರು, ಕಣಬಂದೂರು ಮೂಗುಡ್ತಿ ಇನ್ನಿತರ ಕಡೆಯಲ್ಲಿ ಕುಡಿಯುವ ನೀರಿನ ತೆರೆದ ಬಾವಿಗಳು ತಳಕಾಣುವಂತಾಗಿದ್ದು ಬೋರ್‌ವೆಲ್‌ಗಳಲ್ಲಿ ಸಹ ಅಂತರ್ಜಲ ಇಲ್ಲದೆ ನೀರಿಗಾಗಿ ರೈತರು ಪರಿತಪಿಸುತ್ತಿದ್ದು ಅಡಿಕೆ ತೋಟಕ್ಕೆ ನೀರು ಇಲ್ಲದೆ ಮರಗಳು ಒಣಗುತ್ತಿವೆ ಎಂದು ನೋವಯನ್ನು ಮಾಧ್ಯಮದವರ ಬಳಿ ತೊಡಿಕೊಂಡರು.

Malnad Times

Recent Posts

ಮತದಾನ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ : ರಶ್ಮಿ

ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…

7 mins ago

Election Boycott |  ಲೋಕಸಭಾ ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಮಾಗಲು ಗ್ರಾಮಸ್ಥರು ! ಕಾರಣವೇನು ?

ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…

36 mins ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

7 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

18 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

23 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago