Categories: HosanagaraRipponpete

ಮನೆ-ಮನೆಗಳಿಗೆ ನೀರು ಕೊಡಿ ಇಲ್ಲವಾದರೆ ನೀರಿಲ್ಲದ ಜಾಗಕ್ಕೆ ಕಳುಹಿಸಬೇಕಾಗುತ್ತೆ ; ಪಿಡಿಓಗಳಿಗೆ ಎಚ್ಚರಿಕೆ ನೀಡಿದ ಶಾಸಕ ಬೇಳೂರು

ರಿಪ್ಪನ್‌ಪೇಟೆ: ಜಲಜೀವನ್ ಮಿಷನ್ (JJM) ಯೋಜನೆಯಡಿ ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮಕ್ಕೆ 45 ಲಕ್ಷ ರೂ. ಅನುದಾನ ಬಿಡುಗಡೆಯಾಗಿದ್ದು ಬಹುದಿನಗಳ ಬೇಡಿಕೆಯಂತೆ ಈ ಗ್ರಾಮದಲ್ಲಿನ ಜನಸಾಮಾನ್ಯರು ಕುಡಿಯುವ ನೀರಿಗಾಗಿ ಪರದಾಡುವಂತಾಗಿತ್ತು. ಈ ಯೋಜನೆಯನ್ವಯ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು (Beluru Gopalakrishna) ಕರೆ ನೀಡಿದರು.

ಅವರು ಸಮೀಪದ ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದಲ್ಲಿ 45 ಲಕ್ಷ ರೂ. ವೆಚ್ಚದ ಜಲಜೀವನ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ, ಸ್ಥಳೀಯಾಡಳಿತವು ಕಾಮಗಾರಿ ಕುರಿತು ಚರ್ಚಿಸಿ ಸಮರ್ಪಕವಾಗಿ ಕಾಮಗಾರಿ ನಿರ್ವಹಿಸುವುದರ ಬಗ್ಗೆ ಅಗಾಗ ಮಾಹಿತಿ ಪಡೆಯಬೇಕು. ಈ ಬಾರಿ ಶೇಕಡಾ ವಾಡಿಕೆ ಮಳೆ ಶೇಕಡಾ 75 ಕ್ಕೂ ಹೆಚ್ಚು ಬರಬೇಕಾಗಿದ್ದು 43 ರಷ್ಟು ಮಳೆಯಾಗಿದ್ದು ಅಂತರ್ಜಲ ಸಹ ಕುಸಿದಿದ್ದು ನೀರಿಗಾಗಿ ಜನರು ಪರದಾಡಬೇಕಾಗುವ ದಿನಗಳು ದೂರವಿಲ್ಲ ಆದ್ದರಿಂದಾಗಿ ಸಾರ್ವಜನಿಕರು ಹಂಡೆ ನೀರಿನ ಬದಲು ಬಕೆಟ್ ನೀರಿನಲ್ಲಿ ಸ್ನಾನ ಮಾಡುವುದು ಮತ್ತು ನೀರಿನ ಮಿತ ಬಳಕೆ ಮಾಡುವಂತೆ ಕರೆ ನೀಡಿ ಮಲೆನಾಡಿನ ಪ್ರದೇಶವಾಗಿರುವ ಕಾರಣ ಮನೆಗಳು ದೂರ ದೂರದಲ್ಲಿದ್ದು ಇಲ್ಲಿ ಯಾವುದೇ ತಾರತಮ್ಯ ಮಾಡದೇ ಎಲ್ಲರ ಮನೆಗಳಿಗೂ ನೀರಿನ ಸೌಲಭ್ಯ ದೊರಕುವಂತಾಗಬೇಕು. ಆ ನಿಟ್ಟಿನಲ್ಲಿ ಪಂಚಾಯ್ತಿ ಪಿಡಿಓ ಗಮನಹರಿಸಬೇಕು ಅದು ಬಿಟ್ಟು ಪಂಚಾಯ್ತಿ ಸದಸ್ಯರಿಗೆ ವಿರೋಧವಿದ್ದಾರೆಂದು ಅವರ ಮನೆಗೆ ಕಡಿತ ಗೊಳಿಸಿರುವುದು ನನ್ನ ಗಮನಕ್ಕೆ ಬಂದರೇ ನಿಮ್ಮಗಳನ್ನು ನೀರಿಲ್ಲದ ಊರಿಗೆ ವರ್ಗಾಯಿಸಬೇಕಾಗುತ್ತದೆಂದು ಎಚ್ಚರಿಕೆಯನ್ನು ನೀಡಿದರು.

ಚುನಾವಣೆಯಲ್ಲಿ ಪಕ್ಷ ಗೆದ್ದಮೇಲೆ ಓಟು ಹಾಕಿದವರು ಹಾಕದವರು ಎಂಬ ಬೇಧಭಾವನೆ ಮಾಡದೇ ಎಲ್ಲರೂ ನಮ್ಮವರೇ ಎಂಬ ಭಾವನೆ ನನ್ನದು ಎಂದು ಹೇಳಿ ಈ ಹಿಂದಿನ ಶಾಸಕರು ಮತಹಾಕಿಲ್ಲ ಎಂಬ ಒಂದೇ ಕಾರಣದಿಂದಾಗಿ ಅಭಿವೃದ್ಧಿ ಪಡಿಸದೇ ನಿರ್ಲಕ್ಷ್ಯ ವಹಿಸಿರುವುದಾಗಿ ಹೇಳಿದ್ದಾರೆಂಬ ಬಗ್ಗೆ ನಾನು ಅದನಲ್ಲಾ ಹೇಳಲು ಹೋಗುವುದಿಲ್ಲ ನನಗೆ ಎಲ್ಲರೂ ಒಂದೇ ಎಂಬ ಭಾವನೆಯಲ್ಲಿ ಆಭಿವೃಧ್ದಿಗೆ ಅಧ್ಯತೆ ನೀಡುವುದಾಗಿ ತಿಳಿಸಿ ಮುಂದಿನ ದಿನಗಳಲ್ಲಿ ಸಂಪರ್ಕ ರಸ್ತೆಗೆ ಸರ್ಕಾರದಿಂದ ಅನುದಾನ ಕೊಡಿಸಿ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.

ಸರ್ಕಾರ ಚುನಾವಣೆಯ ವೇಳೆ ಘೋಷಿಸಲಾದ ಗ್ಯಾರಂಟಿ ಯೋಜನೆಗಳಿಂದ ಈಗಾಗಲೇ ಸ್ತ್ರೀಶಕ್ತಿ ಯೋಜನೆಯಡಿ 100 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಉಳಿದಂತೆ ಎಲ್ಲ ಗ್ಯಾರಂಟಿಗಳು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪುವಂತಾಗಿದೆ. ಇನ್ನೂ ಉಳಿದಂತೆ ಬರುವ ಬಜೆಟ್‌ನಲ್ಲಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೇಳಿದ್ದಾರೆಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಬಾಳೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಶ್ರೀನಿವಾಸ್ ಆಚಾರ್, ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ, ಗಣಪತಿ, ಮಧುಸೂದನ, ಆಶೀಫ್‌ಭಾಷಾ, ಪ್ರಕಾಶ ಪಾಲೇಕರ್, ಲೀಲಾವತಿದೊಡ್ಡಯ್ಯ, ರವೀಂದ್ರ ಕೆರೆಹಳ್ಳಿ,ಸಣ್ಣಕ್ಕಿ ಮಂಜ ಹೊಸನಗರ, ಶಶಿಕಲಾ, ರೇಖಾ, ರಾಜಪ್ಪ, ಪಿಡಿಓ ಭರತ್ ಇನ್ನಿತರ ಗ್ರಾಮಸ್ಥರು ಪಕ್ಷ ಮುಖಂಡರು ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago